ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಾ. 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ ಸಾಧ್ಯತೆ

ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕೆಲವೇ ದಿನಗಳಲ್ಲಿ ಕೇಂದ್ರ ಚುನಾವಣಾ ಸಮಿತಿಯು ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ.

ಶುಕ್ರವಾರ ಬೆಳಗ್ಗೆ ಗೋಯೆಲ್ ಹಠಾತ್ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಕಾನೂನು ಸಚಿವಾಲಯವು ಅಧಿಸೂಚನೆಯನ್ನು ಇದನ್ನು ಹೊರಡಿಸಿದೆ. ಇದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಚುನಾವಣಾ ಪ್ರಾಧಿಕಾರದ ಏಕೈಕ ಸದಸ್ಯರನ್ನಾಗಿ ಬಿಡುತ್ತದೆ. ಪಾಂಡೆ ಅವರು ಫೆಬ್ರವರಿ 14 ರಂದು 65 ವರ್ಷಗಳನ್ನು ಪೂರೈಸಿದ ನಂತರ ಅಧಿಕಾರವನ್ನು ತ್ಯಜಿಸಿದ್ದರು.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!

ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರ ನೇತೃತ್ವದಲ್ಲಿ ಗೃಹ ಕಾರ್ಯದರ್ಶಿ, ಸಿಬ್ಬಂದಿ ಇಲಾಖೆ ಮತ್ತು ತರಬೇತಿ ಕಾರ್ಯದರ್ಶಿಗಳನ್ನು ಒಳಗೊಂಡ ಶೋಧನಾ ಸಮಿತಿಯು ಮೊದಲಿಗೆ ಖಾಲಿಯಿರುವ ಎರಡು ಹುದ್ದೆಗಳಿಗೆ ತಲಾ ಐದು ಹೆಸರುಗಳ ಎರಡು ಪ್ರತ್ಯೇಕ ಸಮಿತಿ ರೂಪಿಸುತ್ತದೆ. ನಂತರ, ಪ್ರಧಾನಿ ಮತ್ತು ಕೇಂದ್ರ ಸಚಿವರು, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಚುನಾವಣಾ ಆಯುಕ್ತ ಸ್ಥಾನಕ್ಕೆ ಇಬ್ಬರ ಹೆಸರನ್ನು ಸೂಚಿಸಲಿದೆ. ನಂತರ ರಾಷ್ಟ್ರಪತಿ ಚುನಾವಣಾ ಆಯುಕ್ತರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.

ಆಯ್ಕೆ ಸಮಿತಿಯು ಸದಸ್ಯರ ಅನುಕೂಲಕ್ಕೆ ಅನುಗುಣವಾಗಿ ಮಾರ್ಚ್ 13 ಅಥವಾ 14 ರಂದು ಸಭೆ ನಡೆಸಬಹುದು ಮತ್ತು ಮಾರ್ಚ್ 15 ರೊಳಗೆ ನೇಮಕಾತಿ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com