ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ

ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ, ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ.

2019ರಲ್ಲಿ ಸಂಸತ್ತಿನಲ್ಲಿ ಸಿಎಎಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದರೆ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಗೃಹ ಸಚಿವಲಾ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.

Attachment
PDF
E_gazette_CAA
Preview

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ಈ ಕಾಯ್ದೆ ಅನ್ವಯವಾಗುತ್ತದೆ.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆ ಮುನ್ನ ಸಿಎಎ ಜಾರಿ, NDA 400ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ

ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಪೌರತ್ವ ಪಡೆಯಲು ಅವಕಾಶವಿತ್ತು. ಆದರೆ ತಿದ್ದುಪಡಿ ಮೂಲಕ 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com