ಉತ್ತರ ಪ್ರದೇಶ: ಹೈವೋಲ್ಟೇಜ್ ತಂತಿ ತಗುಲಿ ಬಸ್ ಗೆ ಬೆಂಕಿ, ಐವರು ಸಾವು 11 ಮಂದಿಗೆ ಗಾಯ

ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ
ಮಂಡ್ಯ: ಮನೆಗೆ ನುಗ್ಗಿದ ರಸ್ತೆ ಸಾರಿಗೆ ಬಸ್, ವ್ಯಕ್ತಿ ಸಾವು, ನಾಲ್ವರಿಗೆ ಗಾಯ!
ಮಂಡ್ಯ: ಮನೆಗೆ ನುಗ್ಗಿದ ರಸ್ತೆ ಸಾರಿಗೆ ಬಸ್, ವ್ಯಕ್ತಿ ಸಾವು, ನಾಲ್ವರಿಗೆ ಗಾಯ!

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಸೋಮವಾರ ಹೈವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 11 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬವೊಂದು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮೌವಿನಿಂದ ಮರ್ದಾ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಹರ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಎಸ್‌ಎಚ್‌ಒ ಧರ್ಮೇಂದ್ರ ಕುಮಾರ್ ಪಾಂಡೆ ಅವರು ಪಿಟಿಐಗೆ ತಿಳಿಸಿದ್ದಾರೆ.

ಬಸ್ ಗೆ ಹೈ-ಟೆನ್ಷನ್ ಎಲೆಕ್ಟ್ರಿಕ್ ಲೈನ್‌ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಎಂದು ಪಾಂಡೆ ಹೇಳಿದ್ದಾರೆ.

ಮಂಡ್ಯ: ಮನೆಗೆ ನುಗ್ಗಿದ ರಸ್ತೆ ಸಾರಿಗೆ ಬಸ್, ವ್ಯಕ್ತಿ ಸಾವು, ನಾಲ್ವರಿಗೆ ಗಾಯ!
ಮಧ್ಯ ಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭೀಕರ ಅಪಘಾತ: 14 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಗಾಜಿಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬಗಳೊಂದಿಗೆ ನಾವು ಇರುತ್ತೇವೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com