ಚೆನ್ನೈ: ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಬಿಜೆಪಿಗೆ ಸೇರ್ಪಡೆ!

ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಸಂಘದ ಕೆಲವು ಸದಸ್ಯರು ಸೋಮವಾರ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ರಜನಿಕಾಂತ್
ರಜನಿಕಾಂತ್
Updated on: 

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಸಂಘದ ಕೆಲವು ಸದಸ್ಯರು ಸೋಮವಾರ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಅಣ್ಣಾಮಲೈ ಮತ್ತು ಪಕ್ಷದ ಹಿರಿಯ ನಾಯಕ ಎಚ್. ರಾಜಾ ಅವರು ರಜನಿಕಾಂತ್ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ರಜನಿಕಾಂತ್
ರಜನಿಕಾಂತ್ ಸಂಘಿ ಅಲ್ಲ: ತಂದೆಯನ್ನು ಸಮರ್ಥಿಸಿಕೊಂಡ ಪುತ್ರಿ ಐಶ್ವರ್ಯಾ!

ರಾಜ್ಯದಲ್ಲಿ ಡಿಎಂಕೆಯೇತರ, ಎಐಎಎಂಡಿಕೆಯೇತರ ನೇತೃತ್ವದ ಮೈತ್ರಿಕೂಟವನ್ನು ರೂಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮಾಜಿ ಕೇಂದ್ರ ಸಚಿವ ಜಿಕೆ ವಾಸನ್ ಅವರ ತಮಿಳು ಮಾಣಿಲ ಕಾಂಗ್ರೆಸ್ ಈಗಾಗಲೇ ಬಿಜೆಪಿ ನೇತೃತ್ವದ ಬಣಕ್ಕೆ ಸೇರ್ಪಡೆಯಾಗಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com