ಪ್ರೊ. ಸಾಯಿಬಾಬಾ ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಹಾಗೂ ಇತರರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.
ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್
ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್

ನವದೆಹಲಿ: ನಿಷೇಧಿತ ಸಿಪಿಐ-ಮಾವೋವಾದಿಗಳೊಂದಿಗೆ ನಂಟು ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಹಾಗೂ ಇತರರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಹೈಕೋರ್ಟ್ ತೀರ್ಪಿಗೆ ತಡೆ ಕೋರಿ ಮಹಾರಾಷ್ಟ್ರ ಸರ್ಕಾರ ಕಳೆದ ಮಂಗಳವಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಗೆ ಒಪ್ಪಿಕೊಂಡಿತು. ಹೈಕೋರ್ಟ್ ಆದೇಶ "ಚೆನ್ನಾಗಿ ತರ್ಕಬದ್ಧವಾಗಿದೆ" ಎಂದು ಹೇಳಿದೆ. ಇದೇ ವೇಳೆ ತುರ್ತು ವಿಚಾರಣೆ ನಡೆಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರ ಮೌಖಿಕ ಮನವಿಯನ್ನು ತಿರಸ್ಕರಿಸಿದ ಪೀಠ, ಮೇಲ್ಮನವಿಯ ಆರಂಭಿಕ ಪಟ್ಟಿಗಾಗಿ ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಾಜರಾಗಿ, ಅದು ಸರಿಯಾದ ಸಮಯದಲ್ಲಿ ವಿಚಾರಣೆಗೆ ಬರುತ್ತದೆ ಎಂದು ಹೇಳಿದೆ.

ಸಾಯಿಬಾಬಾ ಮತ್ತು ಸುಪ್ರೀಂ ಕೋರ್ಟ್
ನಕ್ಸಲ್ ನಂಟು ಪ್ರಕರಣ: ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಮಹಾರಾಷ್ಟ್ರ

"ಶಿಕ್ಷೆಯನ್ನು ರದ್ದುಗೊಳಿಸುವ ಆದೇಶದಲ್ಲಿ ಯಾವುದೇ ತುರ್ತು ಇರುವಂತಿಲ್ಲ. ಅದು ಬೇರೆ ರೀತಿಯಲ್ಲಿ ಇದ್ದಿದ್ದರೆ, ನಾವು ಪರಿಗಣಿಸುತ್ತಿದ್ದೆವು," ಎಂದು ಪೀಠ ಹೇಳಿದೆ.

ಮಾರ್ಚ್ 5 ರಂದು, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, 54 ವರ್ಷದ ಸಾಯಿಬಾಬಾ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು. ಆರೋಪಿಗಳ ವಿರುದ್ಧದ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com