ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ಕೈ ಜೋಡಿಸಿದ TTV ದಿನಕರನ್ ಪಕ್ಷ

ಲೋಕಸಭೆ ಚುನಾವಣೆಗೆ ಬಿಜೆಪಿಗೆ ಬೇಷರತ್ ಬೆಂಬಲ ನೀಡುವುದಾಗಿ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ಸೋಮವಾರ ಘೋಷಿಸಿದ್ದಾರೆ.
ಟಿಟಿವಿ ದಿನಕರನ್
ಟಿಟಿವಿ ದಿನಕರನ್
Updated on: 

ಚೆನ್ನೈ: ಲೋಕಸಭೆ ಚುನಾವಣೆಗೆ ಬಿಜೆಪಿಗೆ ಬೇಷರತ್ ಬೆಂಬಲ ನೀಡುವುದಾಗಿ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಮುಖ್ಯಸ್ಥ ಟಿಟಿವಿ ದಿನಕರನ್ ಸೋಮವಾರ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದಿನಕರನ್, ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಖಚಿತವಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಮತ್ತು ಬಿಜೆಪಿ ನಾಯಕ ಕಿಶನ್ ರೆಡ್ಡಿ ನನ್ನೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಬಿಜೆಪಿ ನೇತೃತ್ವದ ಮೈತ್ರಿಗೆ ಎಎಂಎಂಕೆಯ ಬೇಷರತ್ ಬೆಂಬಲವನ್ನು ಅವರಿಗೆ ತಿಳಿಸಿದ್ದೇನೆ ಎಂದರು.

ಚೆನ್ನೈನಿಂದ ಹೊರಗಿರುವ ಕಾರಣ ಸೋಮವಾರ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಕಳೆದ ಆರು ತಿಂಗಳಿನಿಂದ ಬಿಜೆಪಿ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಈಗ ಸುಮಾರು ಮೂರು ತಿಂಗಳಿಂದ ಮಾತುಕತೆ ನಡೆಯುತ್ತಿದೆ ಎಂದು ಎಎಂಎಂಕೆ ನಾಯಕ ಹೇಳಿದರು.

ಟಿಟಿವಿ ದಿನಕರನ್
ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮೂರನೇ ಅವಧಿಗೆ ಅಧಿಕಾರ ನೀಡುವುದು ಖಚಿತವಾದರೂ, ತಮಿಳುನಾಡಿನಲ್ಲಿ ಬಿಜೆಪಿಗೆ ಗೆಲುವು ಸಾಧಿಸಲು ಎಎಂಎಂಕೆ 'ಅಳಿಲು' ರೀತಿಯಲ್ಲಿ ಕೊಡುಗೆ ನೀಡಲಿದೆ.

ಸೀಟು ಹಂಚಿಕೆ ಕುರಿತು ಎಎಂಎಂಕೆ ನಾಯಕ ತಮ್ಮ ಪಕ್ಷದ ಬೇಡಿಕೆಗಳು ಸಮಂಜಸವಾಗಿರುತ್ತವೆ. ಸೀಟು ಹಂಚಿಕೆ ಹಾಗೂ ಪಕ್ಷದ ಅಭ್ಯರ್ಥಿಗಳ ಬಗ್ಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com