ನಮ್ಮ ಅಭಿವೃದ್ಧಿ ಕಾರ್ಯಗಳು ದೇಶ ಕಟ್ಟುವ ಉದ್ದೇಶ ಹೊಂದಿದೆಯೇ ಹೊರತು, ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ದೇಶ ಕಟ್ಟುವ ಧ್ಯೇಯೋದ್ಧೇಶದಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆಯೇ ಹೊರತು ಚುನಾವಣೆಗಳನ್ನು ಗೆಲ್ಲುವ ಸಲುವಾಗಿ ಅಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ.
ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ.
Updated on

ಅಹಮದಾಬಾದ್: ನಮ್ಮ ಸರ್ಕಾರವು ದೇಶ ಕಟ್ಟುವ ಧ್ಯೇಯೋದ್ಧೇಶದಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆಯೇ ಹೊರತು ಚುನಾವಣೆಗಳನ್ನು ಗೆಲ್ಲುವ ಸಲುವಾಗಿ ಅಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಗುಜರಾತ್‌ನ ಅಹಮದಾಬಾದ್ ನಗರದ ಸಬರಮತಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಹೊಸ ವಂದೇ ಭಾರತ್ ರೈಲುಗಳ ಪ್ರಾರಂಭ ಸೇರಿದಂತೆ 85,000 ಕೋಟಿ ರೂ.ಗಳ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೆಲವರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಚುನಾವಣಾ ದೃಷ್ಟಿಕೋನದ ಮೂಲಕ ನೋಡಲು ಪ್ರಯತ್ನಿಸುತ್ತಾರೆ. ಆದರೆ, ನಮ್ಮ ಈ ಕಾರ್ಯ ದೇಶ ಕಟ್ಟುವ ಧ್ಯೇಯವನ್ನು ಹೊಂದಿದೆಯೇ ಹೊರತು. ಚುನಾವಣೆ ಗೆಲ್ಲುವ ಸಲುವಾಗಿ ಅಲ್ಲ. ಹಿಂದಿನ ಯುವ ಪೀಳಿಗೆ ಅನುಭವಿಸಿದ ಸಂಕಷ್ಟಗಳನ್ನು ಇಂದಿನ ಹಾಗೂ ಭವಿಷ್ಯದ ಯುವಕರು ಅನುಭವಿಸುವುದಿಲ್ಲ. ಇದು ಮೋದಿ ನೀಡುತ್ತಿರುವ ಗ್ಯಾರಂಟಿ ಎಂದು ಹೇಳಿದರು.

ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ.
ಮೈಸೂರು-ಚೆನ್ನೈ, ಕಲಬುರಗಿ-ಬೆಂಗಳೂರು ಸೇರಿ 10 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರ ರೈಲ್ವೇ ಅಭಿವೃದ್ಧಿಗೆ ಈ ಹಿಂದೆ ಮಾಡಿದ್ದಕ್ಕಿಂತ ಸುಮಾರು ಆರು ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿದೆ. 2024 ರಲ್ಲಿ ಕೇವಲ ಎರಡು ತಿಂಗಳಲ್ಲಿ ನಾವು 11 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಿದ್ದೇವೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದೇವೆ.

ನಾನು ನನ್ನ ಜೀವನವನ್ನು ರೈಲ್ವೇ ಹಳಿಗಳ ಮೇಲೆ ಪ್ರಾರಂಭಿಸಿದೆ, ಇದರಿಂದ ನಮ್ಮ ರೈಲ್ವೇಗಳು ಮೊದಲು ಎಷ್ಟು ಕೆಟ್ಟದಾಗಿತ್ತು ಎಂಬುದು ನನಗೆ ತಿಳಿದಿದೆ. ಅಧಿಕಾರಕ್ಕೆ ಬಂದ ಬಳಿ ಪ್ರತ್ಯೇಕ ರೈಲ್ವೇ ಬಜೆಟ್ ಅನ್ನು ಸ್ಥಗಿತಗೊಳಿಸಿ ಕೇಂದ್ರ ಬಜೆಟ್‌ನಲ್ಲಿ ಸೇರ್ಪಡೆಗೊಳಿಸಿದ್ದೆ, ಈ ಮೂಲಕ ರೈಲ್ವೇ ಅಭಿವೃದ್ಧಿಗೆ ಸರ್ಕಾರದ ಹಣವನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡಲಾಯಿತು. ಇಲ್ಲಿಯವರೆಗೆ, 350 'ಆಸ್ತಾ' ರೈಲುಗಳು 4.5 ಲಕ್ಷ ಜನರಿಗೆ ಅಯೋಧ್ಯೆಗೆ ಭೇಟಿ ನೀಡಲು ಅನುಕೂಲ ಮಾಡಿಕೊಟ್ಟಿವೆ ಎಂದು ತಿಳಿಸಿದರು.

ಮೋದಿಯವರು ಅಹಮದಾಬಾದ್-ಮುಂಬೈ ಸೆಂಟ್ರಲ್, ಸಿಕಂದರಾಬಾದ್-ವಿಶಾಖಪಟ್ಟಣಂ, ಮೈಸೂರು- ಡಾ.ಎಂಜಿಆರ್ ಸೆಂಟ್ರಲ್ (ಚೆನ್ನೈ), ಪಾಟ್ನಾ-ಲಕ್ನೋ, ನ್ಯೂ ಜಲ್ಪೈಗುರಿ-ಪಾಟ್ನಾ, ಪುರಿ-ವಿಶಾಖಪಟ್ಟಣಂ, ಲಕ್ನೋ-ಡೆಹ್ರಾಡೂನ್, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ರಾಂಚಿ-ವಾರಣಾಸಿ, ಖಜುರಾಹೊ- ದೆಹಲಿ (ನಿಜಾಮುದ್ದೀನ್), ಅಹಮದಾಬಾದ್-ಜಾಮ್‌ನಗರ, ಕಲಬುರಗಿ ಸೇರಿದಂತೆ ಹತ್ತು ಹೊಸ ವಂದೇ ಭಾರತ್ ರೈಲುಗಳಿಗೆ ಇಂದು ಚಾಲನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com