ಐಎಎಫ್ ವಿಮಾನ ಪತನ
ದೇಶ
ರಾಜಸ್ಥಾನ: ಜೈಸಲ್ಮೇರ್‌ನಲ್ಲಿ ಐಎಎಫ್ ವಿಮಾನ ಪತನ, ಪೈಲಟ್ ಪ್ರಾಣಾಪಾಯದಿಂದ ಪಾರು
ರಾಜಸ್ಥಾನದ ಜೈಸಲ್ಮೇರ್‌ನ ಮರುಭೂಮಿ ವಲಯದಲ್ಲಿ ಭಾರತೀಯ ವಾಯುಪಡೆ(ಐಎಎಫ್)ಯ ಯುದ್ಧ ವಿಮಾನವೊಂದು ಮಂಗಳವಾರ ಪತನವಾಗಿದೆ.
ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್‌ನ ಮರುಭೂಮಿ ವಲಯದಲ್ಲಿ ಭಾರತೀಯ ವಾಯುಪಡೆ(ಐಎಎಫ್)ಯ ಯುದ್ಧ ವಿಮಾನವೊಂದು ಮಂಗಳವಾರ ಪತನವಾಗಿದ್ದು, ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ(ಎಲ್‌ಸಿಎ) ತೇಜಸ್ ಇಂದು ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಹೊರ ಬಂದಿದ್ದಾರೆ.
ಅಪಘಾತದ ಕಾರಣವನ್ನು ಕಂಡುಹಿಡಿಯಲು ಉನ್ನತ ಮಟ್ಟದ ತನಿಖೆಗೆ ಐಎಎಫ್ ಆದೇಶಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ