ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್, 6 ಮಂದಿ ದುರ್ಮರಣ

ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್​ವೊಂದು ಮದುವೆ ಮೆರವಣಿಗೆ ಮೇಲೆ ಹರಿದ ಪರಿಣಾಣ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನಾ ಸ್ಥಳ
ಘಟನಾ ಸ್ಥಳ

ರೈಸನ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್​ವೊಂದು ಮದುವೆ ಮೆರವಣಿಗೆ ಮೇಲೆ ಹರಿದ ಪರಿಣಾಣ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಜಿಲ್ಲೆಯ ಖಮಾರಿಯಾ ಘಾಟ್‌ನಲ್ಲಿ ಭೋಪಾಲ್-ಜಬಲ್‌ಪುರ ರಸ್ತೆ NH-45 ನಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 11 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹೋಶಂಗಾಬಾದ್‌ನಿಂದ ರೈಸನ್‌ನ ಪಿಪಾರಿಯಾ ಗ್ರಾಮಕ್ಕೆ ಮದುವೆ ಮೆರವಣಿಗೆ ಬಂದಿತ್ತು. ಇದೇ ವೇಳೆ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮದುವೆ ಮೆರವಣಿಗೆ ಮೇಲೆ ಹರಿದಿದೆ. ಇದರಿಂದಾಗಿ 6 ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳ
ಮಧ್ಯ ಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಭೀಕರ ಅಪಘಾತ: 14 ಮಂದಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 4 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಧನಸಹಾಯವನ್ನು ಮುಖ್ಯಮಂತ್ರಿಗಳು ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಕ್ಯಾಬಿನೆಟ್ ಸಚಿವ ವಿಶ್ವಾಸ್ ಸಾರಂಗ್ ಅವರು ಭೋಪಾಲ್ ಏಮ್ಸ್‌ನಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com