AISMK ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ್
ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ಕನ್ನಡದಲ್ಲೂ ನಟಿಸಿರುವ ಹಿರಿಯ ತಮಿಳು ನಟ ಆರ್ ಶರತ್ ಕುಮಾರ್ ಅವರು ಮಂಗಳವಾರ ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ(ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.
ಎಐಎಸ್‌ಎಂಕೆ ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತ್ ಕುಮಾರ್ ತಮ್ಮ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಿದರು.
ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರತ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ಹೇಳಿದರು.
2026 ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುವಂತೆ 69 ವರ್ಷದ ಶರತ್ ಕುಮಾರ್ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.
ಡಿಎಂಕೆಯಿಂಗ ರಾಜ್ಯಸಭೆಗೆ ಆಯ್ಕೆಯಾಗಿದ್ದ ಶರತ್ ಕುಮಾರ್ ಅವರು ನಂತರ ರಾಜ್ಯಸಭಾ ಸ್ಥಾನ ತ್ಯಜಿಸಿ ಎಐಎಡಿಎಂಕೆ ಸೇರಿದ್ದರು. ಅಂತಿಮವಾಗಿ 2007 ರಲ್ಲಿ AISMK ಸ್ಥಾಪಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ