ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್

ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
ಯದುವೀರ ಒಡೆಯರ್, ಸಿಎನ್ ಮಂಜುನಾಥ್, ವಿ ಸೋಮಣ್ಣ
ಯದುವೀರ ಒಡೆಯರ್, ಸಿಎನ್ ಮಂಜುನಾಥ್, ವಿ ಸೋಮಣ್ಣ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿದಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಈ ಬಾರಿ ಬಿಜೆಪಿ ಒಟ್ಟು 8 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಮೈಸೂರು ಸಂಸದ, ಪ್ರತಾಪ್‌ ಸಿಂಹ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್‌ ಉದಾಸಿ, ತುಮಕೂರು ಸಂಸದ ಜಿಎಸ್‌ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.

ಯದುವೀರ ಒಡೆಯರ್, ಸಿಎನ್ ಮಂಜುನಾಥ್, ವಿ ಸೋಮಣ್ಣ
ಹಾಲಿ ಸಂಸದ ಡಿವಿ ಸದಾನಂದಗೌಡಗೆ ಬಿಜೆಪಿ ಟಿಕೆಟ್ ಮಿಸ್; ಟ್ವೀಟ್ ಮೂಲಕ ವಿದಾಯ ಹೇಳಿದ ಮಾಜಿ ಸಿಎಂ

ಯಾರಿಗೆ ಟಿಕೆಟ್?

  • ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ

  • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್

  • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ

  • ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ

  • ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

  • ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ

  • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ

  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ

  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್

  • ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ

  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ

  • ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು

  • ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ

  • ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು

  • ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್

  • ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು

  • ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್

  • ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ

  • ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ

  • ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಲೋಕಸಭಾ ಚುನಾವಣೆಗೆ ಹೊಸಮುಖಗಳು

ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ

ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು

ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ

ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು

ಗಾಯತ್ರಿ ಸಿದ್ದೇಶ್ವರ-ದಾವಣಗೆರೆ

ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ

ಜೆಡಿಎಸ್​ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು

ಮಂಡ್ಯ

ಹಾಸನ

ಕೋಲಾರ

Attachment
PDF
2nd-list-of-BJP-candidates-for-Lok-Sabha-Election-2024.pdf
Preview

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com