ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡಲಾಗಿದೆ.
ಪಿಯೂಶ್ ಗೋಯಲ್-ಅನುರಾಗ್ ಠಾಕೂರ್-ಗಡ್ಕರಿ
ಪಿಯೂಶ್ ಗೋಯಲ್-ಅನುರಾಗ್ ಠಾಕೂರ್-ಗಡ್ಕರಿPTI

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡಲಾಗಿದೆ. ಇಬ್ಬರು ಮಾಜಿ ಕೇಂದ್ರ ಸಚಿವರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಸದಾನಂದಗೌಡ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯ ಪ್ರಕಾರ, ಗಡ್ಕರಿ ಮತ್ತು ಠಾಕೂರ್ ಕ್ರಮವಾಗಿ ಮಹಾರಾಷ್ಟ್ರದ ನಾಗ್ಪುರ ಮತ್ತು ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಸ್ಪರ್ಧಿಸಲಿದ್ದು, ಖಟ್ಟರ್ ಅವರು ಹರಿಯಾಣದ ಕರ್ನಾಲ್‌ನಿಂದ ಮತ್ತು ಗೋಯಲ್ ಮುಂಬೈ ಉತ್ತರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹರಿದ್ವಾರದಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ಅನಿಲ್ ಬಲೂನಿ ಕೂಡ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಬದಲಿಗೆ ಪೌರಿ ಗರ್ವಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಲುನಿ ಅವರನ್ನು ಕಣಕ್ಕಿಳಿಸಿದೆ. ಮಹಾರಾಷ್ಟ್ರದ ಬೀಡ್ ಕ್ಷೇತ್ರದಲ್ಲಿ ಪಂಕಜಾ ಮುಂಡೆ ಅವರ ಸಹೋದರಿ ಮತ್ತು ಹಾಲಿ ಸಂಸದ ಪ್ರೀತಮ್ ಮುಂಡೆ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಿಯೂಶ್ ಗೋಯಲ್-ಅನುರಾಗ್ ಠಾಕೂರ್-ಗಡ್ಕರಿ
ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್

ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿರುವ 72 ಲೋಕಸಭಾ ಕ್ಷೇತ್ರಗಳಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ತಲಾ 20, ಗುಜರಾತ್‌ನಿಂದ 7, ಹರಿಯಾಣ ಮತ್ತು ತೆಲಂಗಾಣದಿಂದ ತಲಾ 6, ಮಧ್ಯಪ್ರದೇಶದಿಂದ 5, ದೆಹಲಿ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಿಂದ ತಲಾ 2, ತ್ರಿಪುರಾ , ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ತಲಾ ಒಂದು ಸಂಸದೀಯ ಸ್ಥಾನವನ್ನು ಹೊಂದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com