ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾTNIE

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮಾರ್ಚ್ 4 ರಂದು ಸಿಸೋಡಿಯಾ ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ತಮ್ಮ ಕ್ಯುರೇಟಿವ್ ಅರ್ಜಿಯನ್ನು ತಕ್ಷಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ಜಾಮೀನು ನಿರಾಕರಿಸುವ 2023ರ ನಿರ್ಧಾರದ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಮಾರ್ಚ್ 4 ರಂದು ಸಿಸೋಡಿಯಾ ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ತಮ್ಮ ಕ್ಯುರೇಟಿವ್ ಅರ್ಜಿಯನ್ನು ತಕ್ಷಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ಜಾಮೀನು ನಿರಾಕರಿಸುವ 2023ರ ನಿರ್ಧಾರದ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಮನೀಶ್ ಸಿಸೋಡಿಯಾ
ಅಬಕಾರಿ ಹಗರಣ ಸಮನ್ಸ್: ಸೆಷನ್ಸ್ ನ್ಯಾಯಾಲಯ ಮೊರೆ ಹೋದ ಅರವಿಂದ್ ಕೇಜ್ರಿವಾಲ್

2023ರ ಅಕ್ಟೋಬರ್ 30ರಂದು ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಇದಾದ ಬಳಿಕ ಡಿಸೆಂಬರ್ 14ರಂದು ಸುಪ್ರೀಂ ಕೋರ್ಟ್ ಕೂಡ ಅವರ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತ್ತು. ಕ್ಯುರೇಟಿವ್ ಅರ್ಜಿಯ ಮೂಲಕ ಅವರು ಈ ಆದೇಶವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

ಸಿಸೋಡಿಯಾ ಅವರನ್ನು 2023ರ ಫೆಬ್ರವರಿ 26ರಂದು ಪ್ರಕರಣ ಸಂಬಂಧ ಸಿಬಿಐ ಬಂಧಿಸಿತು. ಸಿಬಿಐ ಎಫ್‌ಐಆರ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) 2023ರ ಮಾರ್ಚ್ 9ರಂದು ಸಿಸೋಡಿಯಾ ಅವರನ್ನು ಬಂಧಿಸಿತು. ಹೀಗಾಗಿ 2023ರ ಫೆಬ್ರವರಿ 28ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಿಬಿಐ ಮತ್ತು ಇಡಿ ಈ ಆರೋಪ

ದೆಹಲಿ ಅಬಕಾರಿ ನೀತಿ 2020-21 ಅನ್ನು ಪರಿಷ್ಕರಿಸುವಾಗ ಅಕ್ರಮಗಳು ನಡೆದಿವೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡಲಾಗಿದೆ. ಪರವಾನಗಿ ಶುಲ್ಕವನ್ನು ಮನ್ನಾ ಅಥವಾ ಕಡಿಮೆ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಪರವಾನಗಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com