ಪ್ರಧಾನಿ ಮೋದಿ ವಿರುದ್ಧ 'ಬೆದರಿಕೆ' ಹೇಳಿಕೆ; ತಮಿಳುನಾಡಿನ ಸಚಿವ ಟಿಎಂ ಅನ್ಬರಸನ್ ವಿರುದ್ಧ ದೆಹಲಿಯಲ್ಲಿ ಎಫ್ಐಆರ್

ತಮಿಳುನಾಡು ಸಚಿವ ಟಿಎಂ ಅನ್ಬರಸನ್ ಅವರು ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತಮಿಳುನಾಡು ಸಚಿವ ಟಿಎಂ ಅನ್ಬರಸನ್ ಅವರು ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಸತ್ಯ ರಂಜನ್ ಸ್ವೈನ್ ಅವರ ದೂರಿನ ಆಧಾರದ ಮೇಲೆ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ ಎಂದು ಅವರು ಹೇಳಿದರು.

ಎಫ್ಐಆರ್ ಪ್ರಕಾರ, ತಮಿಳುನಾಡು ಸರ್ಕಾರದ ಗ್ರಾಮೀಣ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು ಮತ್ತು ಸಣ್ಣ ಕೈಗಾರಿಕೆಗಳ ಸಚಿವ ಅನ್ಬರಸನ್ ಅವರು ಮೋದಿಯನ್ನು ತುಂಡು ತುಂಡು ಮಾಡುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ. ದಕ್ಷಿಣ ರಾಜ್ಯದ ಸಾರ್ವಜನಿಕ ರ್ಯಾಲಿಯಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಂದರ್ಭಿಕ ಚಿತ್ರ
ದೆಹಲಿ: ನೀರವ್ ಮೋದಿ, ವಿಜಯ್ ಮಲ್ಯ ಜೊತೆಯಲ್ಲಿ ಪ್ರಧಾನಿ ಮೋದಿ ಚಿತ್ರವಿರುವ ಪೋಸ್ಟರ್ ಪ್ರತ್ಯಕ್ಷ; ಎಫ್ಐಆರ್ ದಾಖಲು

'ಅನ್ಬರಸನ್ ನೀಡಿರುವ ಬೆದರಿಕೆ ಹೇಳಿಕೆಯು ಆತಂಕಕಾರಿ ಮತ್ತು ನಮ್ಮ ಪ್ರಧಾನಿಯ ಸುರಕ್ಷತೆ ಮತ್ತು ಭದ್ರತೆಗೆ ಗಮನಾರ್ಹ ಅಪಾಯವನ್ನುಂಟುಮಾಡುತ್ತದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ನಮ್ಮ ದೇಶದ ಶಾಂತಿ ಮತ್ತು ಸ್ಥಿರತೆಯನ್ನು ಕದಡಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಲಾಗಿದೆ' ಎಂದು ಎಫ್ಐಆರ್‌ನಲ್ಲಿ ದೂರಲಾಗಿದೆ.

ಅನ್ಬರಸನ್ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 268 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 503 (ಕ್ರಿಮಿನಲ್ ಬೆದರಿಕೆ), 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಅನ್ಬರಸನ್ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com