ಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.
ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಸಂವಿಧಾನದ ಕೊನೆಯ ಐದು ವಿಧಿಗಳಲ್ಲಿ ತಿದ್ದುಪಡಿ ಮಾಡಲು ಸಮಿತಿಯು ಶಿಫಾರಸು ಮಾಡಬಹುದು ಎಂದು ವರದಿಗಳು ಹೇಳುತ್ತಿವೆ. ಪ್ರಸ್ತಾವಿತ ವರದಿಯು ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಏಕ ಮತದಾರರ ಪಟ್ಟಿಯನ್ನು ಹೊಂದಲು ಕೇಂದ್ರೀಕರಿಸುತ್ತದೆ ಎಂದು ಹೇಳಲಾಗುತ್ತಿದೆ.

ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
ಒಂದು ದೇಶ ಒಂದು ಚುನಾವಣೆ: ಇವಿಎಂಗಳಿಗೆ ತಗುಲುವ ಖರ್ಚು ಎಷ್ಟು ಗೊತ್ತೇ? ಆಯೋಗದ ಅಂದಾಜು ಹೀಗಿದೆ...

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಏಕಕಾಲದಲ್ಲಿ ಚುನಾವಣೆಗಳನ್ನು ಪರಿಶೀಲಿಸುವ ಮತ್ತು ಶಿಫಾರಸು ಮಾಡುವ ಜವಾಬ್ದಾರಿಯನ್ನು ವಹಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com