One nation, One election: 2029 ರಿಂದ ಜಾರಿ? ಕೋವಿಂದ್ ಸಮಿತಿಯ ಶಿಫಾರಸ್ಸುಗಳೇನು?

ಒಂದು ದೇಶ, ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದು, ಸಮಿತಿ 2023ರ ಸೆಪ್ಟೆಂಬರ್ 2ರಿಂದ ಒಟ್ಟು 191 ದಿನಗಳ ಕಾಲ ಸಂಶೋಧನೆ, ಸಮಾಲೋಚನೆ ಮಾಡಿದ ಬಳಿಕ 18,626 ಪುಟಗಳ ವರದಿಯನ್ನು ಸಲ್ಲಿಸಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದು, ಸಮಿತಿ 2023ರ ಸೆಪ್ಟೆಂಬರ್ 2ರಿಂದ ಒಟ್ಟು 191 ದಿನಗಳ ಕಾಲ ಸಂಶೋಧನೆ, ಸಮಾಲೋಚನೆ ಮಾಡಿದ ಬಳಿಕ 18,626 ಪುಟಗಳ ವರದಿಯನ್ನು ಸಲ್ಲಿಸಿದೆ.

ವರದಿ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ವರದಿಯಲ್ಲಿ ಲೋಕಸಭೆ-ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗೆ ಏಕಕಾಲದಲ್ಲಿ ಚುನಾವಣೆ ನಡೆಸಿ ಮುಂದಿನ 100 ದಿನಗಳ ಅಂತರದಲ್ಲಿ ಪುರಸಭೆ ಚುನಾವಣೆ ನಡೆಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಲಾಗಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
ಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ

ಕೋವಿದ್ ಸಮಿತಿ ಸಲ್ಲಿಸಿರುವ ವರದಿಯಲ್ಲಿನ ಪ್ರಮುಖಾಂಶಗಳು ಇಲ್ಲಿವೆ.

ವರದಿಯ ಮುಖ್ಯವಾದ ಶಿಫಾರಸುಗಳು

ಒಂದು ದೇಶ, ಒಂದು ಚುನಾವಣೆಯು ಮತದಾರರ ಪಾರದರ್ಶಕತೆ, ವಿಶ್ವಾಸವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಏಕಕಾಲಿಕ ಚುನಾವಣೆಗಳನ್ನು ನಡೆಸುವುದಕ್ಕೆ ಹೆಚ್ಚಿನ ಅಭಿವೃದ್ಧಿ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ. ಮತ್ತು ಸಾಮಾಜಿಕ ಒಗ್ಗಟ್ಟು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನು ಆಳಗೊಳಿಸುತ್ತದೆ. ಇದು ಭಾರತದ ಆಶಯವನ್ನು ಸಹ ಸಾಕಾರಗೊಳಿಸುತ್ತದೆ ಎಂದು ಸಮಿತಿ ಹೇಳಿದೆ.

ಲೋಕಸಭೆ-ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ

ಬಹು ಮುಖ್ಯವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವಂತೆ ವರದಿ ಶಿಫಾರಸು ಮಾಡಿದ್ದು, ಚುನಾವಣೆ ನಡೆಸಿದ 100 ದಿನಗಳಲ್ಲಿ ಪುರಸಭೆಗಳಿಗೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ.

ರಾಜ್ಯಗಳಲ್ಲಿ 2029 ರವರೆಗೆ ಮಾತ್ರ ಅಧಿಕಾರಾವಧಿ

ಮುಂದಿನ ತಿಂಗಳುಗಳಲ್ಲಿ ರಚನೆಯಾಗುವ ಎಲ್ಲಾ ರಾಜ್ಯಗಳ ಅಸೆಂಬ್ಲಿಗಳು 2029 ರವರೆಗೆ ಮಾತ್ರ ಅಧಿಕಾರಾವಧಿಯನ್ನು ಹೊಂದಿರುತ್ತವೆ ಎಂದು ವರದಿಯಲ್ಲಿ ಹೇಳಲಾಗಿದ್ದು, ನಂತರ ಲೋಕಸಭೆ ಮತ್ತು ಎಲ್ಲಾ ರಾಜ್ಯ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಗಳನ್ನು ಏಕಕಾಲದಲ್ಲಿ ಒಟ್ಟಿಗೆ ನಡೆಸಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ಅನುಷ್ಠಾನ ಸಮಿತಿ ರಚನೆ

ಇನ್ನು ಈ ಸಮಿತಿ ನೀಡಿದ ಶಿಫಾರಸುಗಳನ್ನು ಕಾರ್ಯಗತಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ. ಭಾರತದ ಸಂವಿಧಾನ ಮತ್ತು ಇತರ ಶಾಸನಬದ್ಧ ನಿಬಂಧನೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಪರಿಗಣಿಸಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಪರಿಶೀಲಿಸಲು ಕೇಳಲಾಗಿದೆ. ಅಂತೆಯೇ ಒಂದು ದೇಶ ಒಂದು ಚುನಾವಣೆ ಜಾರಿಗೆ ಸಂವಿಧಾನ, ಪ್ರಜಾಪ್ರತಿನಿಧಿ ಕಾಯಿದೆ, ಜನತಾ ಪ್ರಾತಿನಿಧ್ಯ ಕಾಯಿದೆ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಯಾವುದೇ ಇತರ ಕಾನೂನು ಅಥವಾ ನಿಯಮಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಮಾಡಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಬೇಕು ಎಂದು ಸಮಿತಿ ಹೇಳಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
ಒಂದು ದೇಶ ಒಂದು ಚುನಾವಣೆ: ಇವಿಎಂಗಳಿಗೆ ತಗುಲುವ ಖರ್ಚು ಎಷ್ಟು ಗೊತ್ತೇ? ಆಯೋಗದ ಅಂದಾಜು ಹೀಗಿದೆ...

ಅವಿಶ್ವಾಸ ನಿರ್ಣಯ ಅಂತಹ ಯಾವುದೇ ಸಂದರ್ಭದಲ್ಲಿ, ಹೊಸ ಸದನವನ್ನು ರಚಿಸಲು ಹೊಸ ಚುನಾವಣೆಗಳನ್ನು ನಡೆಸಬಹುದು ಎಂದು ವರದಿ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ.

ಮತದಾರರು ಗುರುತಿನ ಚೀಟಿ

ಸಮಿತಿಯು ರಾಜ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಭಾರತೀಯ ಚುನಾವಣಾ ಆಯೋಗದಿಂದ ಸಾಮಾನ್ಯ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲು ಶಿಫಾರಸು ಮಾಡಿದೆ.

ಸಮಿತಿಯು ಹಲವಾರು ಸಾಂವಿಧಾನಿಕ ತಿದ್ದುಪಡಿಗಳನ್ನು ಶಿಫಾರಸು ಮಾಡಿದ್ದು, ಅವುಗಳಲ್ಲಿ ಹೆಚ್ಚಿನವುಗಳಿಗೆ ರಾಜ್ಯ ಸರ್ಕಾರಗಳ ಅನುಮೋದನೆಯ ಅಗತ್ಯವಿಲ್ಲ ಎಂದು ಹೇಳಿದೆ.

ಪ್ರಸ್ತುತ, ಚುನಾವಣಾ ಆಯೋಗ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಜವಾಬ್ದಾರರಾಗಿದ್ದರೆ, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗಗಳು ನಿರ್ವಹಿಸುತ್ತವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಮಿತಿಯಿಂದ ವರದಿ ಸಲ್ಲಿಕೆ
'ಒಂದು ರಾಷ್ಟ್ರ, ಚುನಾವಣೆ ಇಲ್ಲ': ಏಕಕಾಲಕ್ಕೆ ಚುನಾವಣೆ ಕುರಿತು ಕೋವಿಂದ್ ವರದಿಗೆ ಕಾಂಗ್ರೆಸ್ ಕಿಡಿ

ಒಂದು ರಾಷ್ಟ್ರ, ಒಂದು ಚುನಾವಣೆ: ಮೊದಲ ಕಲ್ಪನೆ

ONOP ಅಂದರೆ ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆಯನ್ನು ಮೊದಲು 1980ರಲ್ಲಿ ಪ್ರಸ್ತಾಪಿಸಲಾಗಿತ್ತು. ಚುನಾವಣಾ ಆಯೋಗವು 1983 ರಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಬಹುದಾದಂತಹ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಸೂಚಿಸಿತ್ತು. ಮೇ 1999 ರಲ್ಲಿ ತನ್ನ 170 ನೇ ವರದಿಯಲ್ಲಿ, ನ್ಯಾಯಮೂರ್ತಿ ಬಿ ಪಿ ಜೀವನ್ ರೆಡ್ಡಿ ನೇತೃತ್ವದ ಕಾನೂನು ಆಯೋಗವು ನಾವು ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಯುವ ಪರಿಸ್ಥಿತಿಗೆ ಹಿಂತಿರುಗಬೇಕು ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com