ರಾಜ್ಯಸಭೆ ಸದಸ್ಯೆಯಾಗಿ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ

73 ವರ್ಷದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆಯಾಗಿದ್ದು ಹಲವು ಪುಸ್ತಕಗಳ ಲೇಖಕಿಯಾಗಿದ್ದು, ಹೆಚ್ಚಾಗಿ ಮಕ್ಕಳಿಗಾಗಿ ಪುಸ್ತಕ ಬರೆದಿದ್ದಾರೆ.
ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ಸುಧಾಮೂರ್ತಿ
ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ಸುಧಾಮೂರ್ತಿ

ನವದೆಹಲಿ: ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಗುರುವಾರ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೂಲತಃ ಇಂಜಿನಿಯರ್ ಆಗಿರುವ ಸುಧಾ ಮೂರ್ತಿ ಅವರು ತಮ್ಮ ಪತಿ ಎನ್ ಆರ್ ನಾರಾಯಣ ಮೂರ್ತಿ ಅವರ ಸಮ್ಮುಖದಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.

ಕನ್ನಡದಲ್ಲಿ ಪ್ರಮಾಣವಚನ: 73 ವರ್ಷದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆಯಾಗಿದ್ದು ಹಲವು ಪುಸ್ತಕಗಳ ಲೇಖಕಿಯಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಜನಪ್ರಿಯರಾಗಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಸಾಕಷ್ಟು ಜನಪ್ರಿಯರಾಗಿದ್ದಾರೆ.

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀಮತಿ ಸುಧಾಮೂರ್ತಿ
Women's day: ಇನ್ಪೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಮೂಲತಃ ಹುಬ್ಬಳ್ಳಿ ಕಡೆಯವರಾದ ಸುಧಾಮೂರ್ತಿಯವರಿಗೆ ಕನ್ನಡ ಭಾಷೆಯೆಂದರೆ ವಿಶೇಷ ಒಲವು, ಅಚ್ಚುಮೆಚ್ಚು. ಅದನ್ನು ಪದೇಪದೇ ನಿರೂಪಿಸುತ್ತಿರುತ್ತಾರೆ. ಇಂದು ರಾಜ್ಯಸಭೆ ಸದಸ್ಯರಾಗಿ ಕೂಡ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು. ಕಳೆದ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.

ಸುಧಾಮೂರ್ತಿಯವರು ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಹೆಸರುವಾಸಿಯಾಗಿದ್ದಾರೆ. ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಪದ್ಮಶ್ರೀ (2006) ಮತ್ತು ಪದ್ಮಭೂಷಣ (2023) ಪುರಸ್ಕೃತರಾಗಿದ್ದಾರೆ.

TELCO ನೊಂದಿಗೆ ಕೆಲಸ ಮಾಡಿದ ಮೊದಲ ಮಹಿಳಾ ಇಂಜಿನಿಯರ್ ಆಗಿರುವ ಸುಧಾಮೂರ್ತಿ, ಈಗ USD 80 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಕ್ಯಾಪ್ ಹೊಂದಿರುವ ಇನ್ಫೋಸಿಸ್ ನ್ನು ಪ್ರಾರಂಭಿಸಲು ತಮ್ಮ ಪತಿ ನಾರಾಯಣ ಮೂರ್ತಿಯವರಿಗೆ 10,000 ರೂಪಾಯಿ ಹಣ ಒದಗಿಸಿದ್ದರು.

ಅವರ ಮಗಳು ಅಕ್ಷತಾ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ವಿವಾಹವಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com