ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್‌ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ

ಕೊಯಮತ್ತೂರಿನಲ್ಲಿ ಮಾರ್ಚ್ 18ಕ್ಕೆ ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಚೆನ್ನೈ: ಕೊಯಮತ್ತೂರಿನಲ್ಲಿ ಮಾರ್ಚ್ 18ಕ್ಕೆ ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಭದ್ರತೆಯ ಕಾರಣ ನೀಡಿ ಕೊಯಮತ್ತೂರು ಪೊಲೀಸರು ಪ್ರಧಾನಿ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಜೆ.ರಮೇಶ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕು ಕಿಮೀ ರೋಡ್ ಶೋ ನಡೆಸಲು ಬಿಜೆಪಿಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಕೊಯಮತ್ತೂರು ಪೊಲೀಸರಿಗೆ ಸೂಚಿಸಿದೆ.

ಪ್ರಧಾನಿ ಮೋದಿ ಅವರು ಆರ್‌ಎಸ್ ಪುರಂನಲ್ಲಿ ಸಾರ್ವಜನಿಕ ಭಾಷಣದ ನಂತರ ಸೋಮವಾರ ಸಂಜೆ 4 ರಿಂದ 6 ಗಂಟೆಯವರೆಗೆ ಆರ್‌ಎಸ್ ಪುರಂನಲ್ಲಿರುವ ಏರು ಕಂಪನಿ ಜಂಕ್ಷನ್‌ನಿಂದ ಡಿಬಿ ರಸ್ತೆ ಜಂಕ್ಷನ್‌ವರೆಗೆ 4 ಕಿಲೋಮೀಟರ್ ರೋಡ್‌ಶೋ ನಡೆಸಲು ತಮಿಳುನಾಡು ಬಿಜೆಪಿ ಪೊಲೀಸರ ಅನುಮತಿ ಕೋರಿತ್ತು.

ಪ್ರಧಾನಿ ನರೇಂದ್ರ ಮೋದಿ
ಭದ್ರತೆ ಆತಂಕ: ಪ್ರಧಾನಿ ಮೋದಿ ರೋಡ್‌ಶೋಗೆ ಅನುಮತಿ ನಿರಾಕರಿಸಿದ ಕೊಯಮತ್ತೂರು ಪೊಲೀಸರು

ಈ ಸಂಬಂಧ ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಜೆ.ರಮೇಶ್ ಕುಮಾರ್ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಪೊಲೀಸರಿಗೆ ಪತ್ರ ಬರೆದಿದ್ದರು. ವಿವಿಧ ಅಧಿಕಾರಿಗಳೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಿದ ನಂತರ ಶುಕ್ರವಾರ ನಗರ ಪೊಲೀಸರು ರೋಡ್ ಶೋಗೆ ಅನುಮತಿ ನಿರಾಕರಿಸಿದ್ದರು.

ರಮೇಶ್ ಕುಮಾರ್ ಅವರಿಗೆ ನೀಡಿದ ಉತ್ತರದಲ್ಲಿ, ದೇಶೀಯ ಮತ್ತು ವಿದೇಶಿ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚಿನ ಭದ್ರತಾ ಆತಂಕ ಇರುವ ಬಗ್ಗೆ ರಾಜ್ಯ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಸ್ವೀಕರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com