ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ಅಧಿಕಾರ ಸ್ವೀಕಾರ: ತಡೆಯಾಜ್ಞೆ ನೀಡಲು 'ಸುಪ್ರೀಂ' ನಕಾರ

2023ರ ಕಾನೂನಿನ ಅಡಿಯಲ್ಲಿ ಇಬ್ಬರು ಹೊಸ ಚುನಾವಣಾ ಆಯುಕ್ತರ (ECs) ನೇಮಕಾತಿ ತಡೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ
ಮುಖ್ಯ ಚುನಾವಣಾ ಆಯುಕ್ತರೊಂದಿಗೆ ನೂತನವಾಗಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು
ಮುಖ್ಯ ಚುನಾವಣಾ ಆಯುಕ್ತರೊಂದಿಗೆ ನೂತನವಾಗಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು

ನವದೆಹಲಿ: 2023ರ ಕಾನೂನಿನ ಅಡಿಯಲ್ಲಿ ಇಬ್ಬರು ಹೊಸ ಚುನಾವಣಾ ಆಯುಕ್ತರ (ECs) ನೇಮಕಾತಿ ತಡೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ. 2023ರ ಕಾನೂನಿನ ಅಡಿಯಲ್ಲಿ ಭಾರತದ ಮುಖ್ಯ ನ್ಯಾಯಾಧೀಶರನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಾಗಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು 2023ರ ಕಾನೂನಿಗೆ ಅನುಸಾರವಾಗಿ ಮಾಡಲಾದ ನೇಮಕಾತಿಗಳನ್ನು ತಡೆಹಿಡಿಯಲು ನಿರಾಕರಿಸಿದೆ. ಚುನಾವಣಾ ಆಯುಕ್ತರ ಆಯ್ಕೆಗೆ ಸಭೆಯನ್ನು ಮುಂಚಿತವಾಗಿ ನಡೆಸಿ ಆಯ್ಕೆ ಮಾಡಲಾಗಿರುವುದು ಕಾನೂನುಬಾಹಿರ ಎಂಬ ವಿಷಯವನ್ನು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಎಂದು ಹೇಳಿದೆ.

2023ರ ಕಾನೂನಿನಡಿಯಲ್ಲಿ ಇಬ್ಬರು ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ತಳ್ಳಿಹಾಕಿತು.

2024ರ ಕಾನೂನಿನ ಪ್ರಕಾರ ಮಾಡಿರುವ ನೇಮಕಾತಿಗೆ ತಡೆಯೊಡ್ಡಲು ನಿರಾಕರಿಸಿದ ನ್ಯಾಯಪೀಠ, ಸಾಮಾನ್ಯವಾಗಿ ನಾವು ಮಧ್ಯಂತರ ಆದೇಶ ಮೂಲಕ ಕಾನೂನಿಗೆ ತಡೆಯನ್ನು ತರುವುದಿಲ್ಲ ಎಂದು 2023ರ ಕಾನೂನಿನ ಅಡಿಯಲ್ಲಿ ನೇಮಕವಾದ ಇಬ್ಬರು ಚುನಾವಣಾ ಆಯುಕ್ತರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ತಳ್ಳಿಹಾಕಿತು.

ಅರ್ಜಿದಾರ ಜಯಾ ಠಾಕೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್, ತೀರ್ಪು ನೀಡಿದಾಗ ಯಾವುದೇ ಉಲ್ಲಂಘನೆಯಾಗುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯಿದೆ, 2023 ರಲ್ಲಿ ಸ್ಪಷ್ಟವಾದ ಉಲ್ಲಂಘನೆಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಮುಖ್ಯ ಚುನಾವಣಾ ಆಯುಕ್ತರೊಂದಿಗೆ ನೂತನವಾಗಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು
ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ನೇಮಕ

ಭಾರತೀಯ ಆಡಳಿತ ಸೇವೆಯ (IAS) ಮಾಜಿ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಆಯ್ಕೆ ಮಾಡಿತು.

ಇಂದು ಅಧಿಕಾರ ಸ್ವೀಕಾರ: ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯೋಗದಲ್ಲಿ ಎರಡು ಹುದ್ದೆಗಳು ಖಾಲಿಯಾಗಿದ್ದವು. ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಇಂದು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಅವರನ್ನು ಸ್ವಾಗತಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ನಡೆಸಲು ಸಜ್ಜಾಗಿರುವ ಐತಿಹಾಸಿಕ ಘಟ್ಟದಲ್ಲಿ ಅವರ ಸೇರ್ಪಡೆಯ ಮಹತ್ವದ ಕುರಿತು ಮಾತನಾಡಿದರು

1988ರ ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸಂಧು ಕ್ರಮವಾಗಿ ಕೇರಳ ಮತ್ತು ಉತ್ತರಾಖಂಡ್ ಕೇಡರ್‌ಗೆ ಸೇರಿದವರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com