ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ 16 ಮಧ್ಯಾಹ್ನ 3 ಗಂಟೆಗೆ ಬಿಡುಗಡೆ: ಚುನಾವಣಾ ಆಯೋಗ

ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಲೋಕಸಭೆ ಚುನಾವಣೆ ಮತದಾನ
ಲೋಕಸಭೆ ಚುನಾವಣೆ ಮತದಾನ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಹೌದು.. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದು, ನಾಳೆ ಅಂದರೆ ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಅಲ್ಲದೆ ಈ ಸುದ್ದಿಗೋಷ್ಠಿಯನ್ನು ಟ್ವಿಟರ್/ಎಕ್ಸ್ ಪ್ಲಾಟ್ ಫಾರ್ಮ್ ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದೆ.

17 ನೇ ಲೋಕಸಭೆಯ ಅಧಿಕಾರಾವಧಿಯು 16 ಜೂನ್ 2024 ರಂದು ಕೊನೆಗೊಳ್ಳಲಿದೆ.

ಲೋಕಸಭೆ ಚುನಾವಣೆ ಮತದಾನ
Breaking: ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರದ ಗಿಫ್ಟ್: ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ ಗೆ 2 ರೂ. ಇಳಿಕೆ!

4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ

ಲೋಕಸಭೆ ಮಾತ್ರವಲ್ಲದೇ 4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ ಫಿಕ್ಸ್ ಆಗಲಿದ್ದು, ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

2019ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಗೆಲುವು ಸಾಧಿಸಿ ಒಟ್ಟು 303 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಈ ಚುನಾವಣೆಯಲ್ಲಿ ಒಟ್ಟು 912 ಮಿಲಿಯನ್ ಅರ್ಹ ಮತದಾರರ ಪೈಕಿ ಶೇ. 67%ರಷ್ಟು ಮತದಾನವಾಗಿತ್ತು. ಈ ಪೈಕಿ ಬಿಜೆಪಿ 37.36% ಮತಗಳನ್ನು ಪಡೆದಿದ್ದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಒಟ್ಟು 353 ಸ್ಥಾನಗಳನ್ನು ಗೆದ್ದಿತ್ತು.

ಇದಕ್ಕೆ ವ್ಯತಿರಿಕ್ತವಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ವಿರೋಧ ಪಕ್ಷದ ನಾಯಕತ್ವವನ್ನು ಪಡೆಯಲು ಅಗತ್ಯವಿರುವ ಶೇ.10% ಕ್ಕಿಂತ ಕಡಿಮೆಯಾಗಿದೆ. ಅಂತೆಯೇ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA) 91 ಸ್ಥಾನಗಳನ್ನು ಪಡೆದುಕೊಂಡಿತ್ತು. ಇತರ ಪಕ್ಷಗಳು 98 ಸ್ಥಾನಗಳನ್ನು ಗೆದ್ದಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com