ಇವಿಎಂಗಳ ಕಾರ್ಯನಿರ್ವಹಣೆಯಲ್ಲಿ ಲೋಪ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಇವಿಎಂ (ವಿದ್ಯುನ್ಮಾನ ಮತ ಯಂತ್ರ)ಗಳ ಕಾರ್ಯನಿರ್ವಹಣೆಯಲ್ಲಿನ ಅವ್ಯವಹಾರಗಳ ಆರೋಪದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್PTI

ನವದೆಹಲಿ: ಇವಿಎಂ (ವಿದ್ಯುನ್ಮಾನ ಮತ ಯಂತ್ರ)ಗಳ ಕಾರ್ಯನಿರ್ವಹಣೆಯಲ್ಲಿನ ಅವ್ಯವಹಾರಗಳ ಆರೋಪದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ.

"ಪ್ರತಿಯೊಂದು ವಿಧಾನಕ್ಕೂ ಅದರ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳಿರುತ್ತವೆ ಎಂದು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾದ ಮನವಿಯನ್ನು ವಿಚಾರಣೆಗೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್
ಮತಯಂತ್ರ ದೋಷದ ವಿಚಾರ ಇತ್ಯರ್ಥವಾಗುವವರೆಗೂ ಪ್ರತಿಪಕ್ಷಗಳು ಉಪ ಚುನಾವಣೆ ಬಹಿಷ್ಕರಿಸಬೇಕು: ಉದ್ಧವ್ ಠಾಕ್ರೆ

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಈ ನ್ಯಾಯಾಲಯವು ಈಗಾಗಲೇ ಇಂತಹ ಹಲವಾರು ಅರ್ಜಿಗಳನ್ನು ಪದೇ ಪದೇ ಪರಿಶೀಲಿಸಿದ್ದು, ಇವಿಎಂಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ವ್ಯವಹರಿಸಿದೆ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ.

"ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? ಇತ್ತೀಚೆಗೆ, ನಾವು VVPAT ಗೆ ಸಂಬಂಧಿಸಿದ ಮನವಿಯನ್ನು ವ್ಯವಹರಿಸಿದ್ದೇವೆ. ನಾವು ಊಹೆಗಳ ಮೂಲಕ ಹೋಗಲಾಗುವುದಿಲ್ಲ. ಪ್ರತಿಯೊಂದು ವಿಧಾನವು ಅದರ ಪ್ಲಸ್ ಮತ್ತು ಮೈನಸ್ ಪಾಯಿಂಟ್‌ಗಳನ್ನು ಹೊಂದಿರುತ್ತದೆ. ಕ್ಷಮಿಸಿ, ನಾವು ಇದನ್ನು ಆರ್ಟಿಕಲ್ 32 ರ ಅಡಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ" ಎಂದು ಪೀಠವು ಅರ್ಜಿದಾರರಿಗೆ ತಿಳಿಸಿದ್ದು, ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯವನ್ನು ಸುಪ್ರೀಂ ಕೋರ್ಟ್ ವಿವಿಧ ಅರ್ಜಿಗಳಲ್ಲಿ ಪರಿಶೀಲಿಸಿದೆ ಎಂದು ಪೀಠವು ಆದೇಶದಲ್ಲಿ ದಾಖಲಿಸಿದೆ. 10 ಕ್ಕೂ ಹೆಚ್ಚು ಪ್ರಕರಣಗಳನ್ನು ನ್ಯಾಯಾಲಯವು ಪದೇ ಪದೇ ಪರಿಶೀಲಿಸಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com