ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ

ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಲೋಕಸಭೆ ಚುನಾವಣೆಗೆ ಮುನ್ನ ಶನಿವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ
ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಶನಿವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

ಇಂದು ದೆಹಲಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಅನುರಾಧಾ ಪೌಡ್ವಾಲ್ ಅವರು ಬಿಜೆಪಿಗೆ ಸೇರ್ಪಡೆಯಾದರು.

ಬಳಿಕ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೌಡ್ವಾಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು ಮತ್ತು ಅವರ ನೇತೃತ್ವದ ಪಕ್ಷಕ್ಕೆ ಸೇರಲು ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದರು.

ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ
ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಇತರ ಹಿರಿಯ ನಾಯಕರ ಅನುರಾಧಾ ಪೌಡ್ವಾಲ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com