ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು ಮಂಜೂರು!

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕೇಜ್ರಿವಾಲ್ ಗೆ ಇಡಿ ಅಧಿಕಾರಿಗಳು 8 ಬಾರಿ ಸಮನ್ಸ್ ನೀಡಿದ್ದರು. 8 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನಲೆ ಇಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ನಂತರ ಕೋರ್ಟ್ ಕ್ರೇಜ್ರಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು, ವಿಚಾರಣೆ ನಡೆಸಿದ ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಅರವಿಂದ್ ಕೇಜ್ರಿವಾಲ್
ಅಬಕಾರಿ ಹಗರಣ ಸಮನ್ಸ್: ಸೆಷನ್ಸ್ ನ್ಯಾಯಾಲಯ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರನ್ನೊಳಗೊಡ ನ್ಯಾಯಪೀಠವು ಕೇಜ್ರಿವಾಲ್ ಅವರನ್ನು ಕೋರ್ಟ್ ನಿಂದ ಹೊರಹೋಗಲು ಅನುಮತಿ ನೀಡಿದೆ. ಅಪರಾಧವು ಜಾಮೀನು ಪಡೆಯಬಹುದಾದ ಕಾರಣ, ಆರೋಪಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ಒಪ್ಪಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ದೂರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಜ್ರಿವಾಲ್‌ಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಇಡಿಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಅನೇಕ ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಅವರ ಪ್ರಾಸಿಕ್ಯೂಷನ್ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಮ್ಯಾಜಿಸ್ಟ್ರೀಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com