ರೂಫ್ ಟಾಪ್ ಸೌರ ಯೋಜನೆಗೆ 1 ಕೋಟಿಗೂ ಹೆಚ್ಚು ಕುಟುಂಬಗಳ ನೋಂದಣಿ: ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮೇಲ್ಛಾವಣಿ ಸೌರ ಯೋಜನೆಗೆ ಈಗಾಗಲೇ ಸುಮಾರು 1 ಕೋಟಿಗೂ ಹೆಚ್ಚು ಕುಟುಂಬಗಳು ನೋಂದಣಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
ಮೇಲ್ಛಾವಣಿ ಸೌರ ಯೋಜನೆ
ಮೇಲ್ಛಾವಣಿ ಸೌರ ಯೋಜನೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮೇಲ್ಛಾವಣಿ ಸೌರ ಯೋಜನೆಗೆ ಈಗಾಗಲೇ ಸುಮಾರು 1 ಕೋಟಿಗೂ ಹೆಚ್ಚು ಕುಟುಂಬಗಳು ನೋಂದಣಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವಿಟರ್/ಎಕ್ಸ್ ನಲ್ಲಿ ಶನಿವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಒಂದು ಕೋಟಿಗೂ ಹೆಚ್ಚು ಕುಟುಂಬಗಳು ಈಗಾಗಲೇ ಮೇಲ್ಛಾವಣಿ ಸೌರ ಯೋಜನೆ 'ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ಅಡಿಯಲ್ಲಿ ನೋಂದಾಯಿಸಿಕೊಂಡಿವೆ ಮತ್ತು ಇದು 'ಅತ್ಯುತ್ತಮ ಸುದ್ದಿ' ಎಂದು ಶ್ಲಾಘಿಸಿದ್ದಾರೆ.

ಮೇಲ್ಛಾವಣಿ ಸೌರ ಯೋಜನೆ
'ಸೂರ್ಯೋದಯ ಯೋಜನೆ' ಘೋಷಿಸಿದ ಪ್ರಧಾನಿ ಮೋದಿ; 1 ಕೋಟಿ ಮನೆಗಳಿಗೆ ಸೋಲಾರ್ ಪ್ಯಾನೆಲ್ ಅಳವಡಿಕೆ

"ರಾಷ್ಟ್ರದ ಎಲ್ಲಾ ಭಾಗಗಳಿಂದ ನೋಂದಣಿಗಳು ಹರಿದುಬರುತ್ತಿವೆ. ಅಸ್ಸಾಂ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳು 5 ಲಕ್ಷಕ್ಕೂ ಹೆಚ್ಚು ನೋಂದಣಿಗಳನ್ನು ಕಂಡಿವೆ. ಇನ್ನೂ ನೋಂದಣಿ ಮಾಡದಿರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳುವಂತೆ ಪ್ರಧಾನಮಂತ್ರಿ ಕೇಳಿಕೊಂಡರು.

ಈ ಉಪಕ್ರಮವು ಇಂಧನ ಉತ್ಪಾದನೆಯನ್ನು ಖಾತ್ರಿಪಡಿಸುವುದರ ಜೊತೆಗೆ ಮನೆಗಳಿಗೆ ವಿದ್ಯುತ್ ವೆಚ್ಚದಲ್ಲಿ ಗಣನೀಯ ಪ್ರಮಾಣದ ಕಡಿತವನ್ನು ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಅಂತೆಯೇ ಇದು ಪರಿಸರಕ್ಕಾಗಿ ಜೀವನಶೈಲಿಯನ್ನು (ಲೈಫ್) ದೊಡ್ಡ ಪ್ರಮಾಣದಲ್ಲಿ ಪ್ರೋತ್ಸಾಹಿಸಲು ಸಿದ್ಧವಾಗಿದೆ, ಇದು ಉತ್ತಮ ಗೃಹಕ್ಕೆ ಕೊಡುಗೆ ನೀಡುತ್ತದೆ" ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕಳೆದ ತಿಂಗಳು ರೂ. 75,021 ಕೋಟಿ ವೆಚ್ಚದ ರೂಫ್‌ಟಾಪ್ ಸೋಲಾರ್ ಪ್ಯಾನೆಲ್‌ಗಳನ್ನು ಸ್ಥಾಪಿಸಲು ಮತ್ತು ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ಅನುಮೋದನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com