ಖರ್ಗೆ ತವರು ನೆಲದಿಂದ ಚುನಾವಣಾ ಪ್ರಚಾರ ಆರಂಭ: ಪ್ರಧಾನಿ ಮೋದಿ ಆಗಮನ ಹೊತ್ತಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯದ ಬಿಸಿ

ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ಬೆಂಗಳೂರು: ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ.

ಇಂದು ಮಧ್ಯಾಹ್ನ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳು ಮಾತನಾಡಲಿದ್ದಾರೆ.

ಬಂಡಾಯದ ಬಿಸಿ: ಆದರೆ ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಇದ್ದಂತೆ ಈ ಬಾರಿ ಕರ್ನಾಟಕದಲ್ಲಿ ಪರಿಸ್ಥಿತಿಯಿಲ್ಲ. ಬಿಜೆಪಿಯಲ್ಲಿ ಹಲವು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ ನಾಯಕರಿಗೆ ಬಂಡಾಯದ ಬಿಸಿ ತಟ್ಟಿದೆ. ಭಿನ್ನಮತದ ಬೇಗೆಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಚುನಾವಣೆ ಪ್ರಚಾರ ಆರಂಭಿಸುವಂತಾಗಿದೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯದ ಕಿಚ್ಚು: ಶಿವಮೊಗ್ಗದಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ದೊರೆಯದ ವಿಚಾರವಾಗಿ ಸಿಡಿದೆದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ವಿರುದ್ಧ ತಾವು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ತಮ್ಮ ಬಂಡಾಯ ಶಿವಮೊಗ್ಗ ಕ್ಷೇತ್ರಕಷ್ಟೇ ಸೀಮಿತ. ಈ ರಾಜ್ಯದ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕಪಿಮುಷ್ಠಿಯಲ್ಲಿದೆ. ಅವರಿಂದ ಬಿಡಿಸಲು ನಾನು ಈ ಬಾರಿ ಸ್ವತಂತ್ರವಾಗಿ ಸ್ಪರ್ಧಿಸುವುದು ಅನಿವಾರ್ಯವಾಗಿದೆ, ಯಾರು ಏನೇ ಹೇಳಿದರೂ ನನ್ನ ಸ್ಪರ್ಧೆ ನಿಶ್ಚಿತ ಎಂದು ಈಶ್ವರಪ್ಪ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪಕ್ಷದ ವಿರುದ್ಧ ಕೆಎಸ್ ಈಶ್ವರಪ್ಪ ಬಂಡಾಯ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಣೆ!

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪಗೆ ಟಿಕೆಟ್ ನಿರಾಕರಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಅವರ ಪುತ್ರನಿಗೆ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಟಿಕೆಟ್ ಕೊಡಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಇದೀಗ ಹಾವೇರಿ ಟಿಕೆಟ್ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಘೋಷಣೆಯಾದ ಬೆನ್ನಲ್ಲೇ ಈಶ್ವರಪ್ಪ ಅಸಮಾಧಾನ ಸ್ಫೋಟಗೊಂಡಿದೆ. ಅಪ್ಪ ಮಕ್ಕಳು ಮೋಸ ಮಾಡಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಮತ್ತೊಂದೆಡೆ, ಕಾಂತೇಶ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಬಿಜೆಪಿ ಆಫರ್ ನ್ನು ಕೂಡ ಈಶ್ವರಪ್ಪ ತಿರಸ್ಕರಿಸಿದ್ದಾರೆ. ಇದರಿಂದಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯದ ಬಿಸಿ ಜೋರಾಗಿದೆ.

ಈಶ್ವರಪ್ಪನವರು ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸದಂತೆ ನಾಯಕರು ಮನವೊಲಿಸುತ್ತಾರೆ. ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದು ಹೋದ ನಂತರ ಸಮಸ್ಯೆ ಬಗೆಹರಿಯಲಿದೆ ಎಂಬ ವಿಶ್ವಾಸದಲ್ಲಿ ರಾಜ್ಯ ನಾಯಕರಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ
ಈಶ್ವರಪ್ಪ ಬೆನ್ನಲ್ಲೇ BSY ವಿರುದ್ಧ ಮತ್ತೋರ್ವ ನಾಯಕ ಸಿಡಿಮಿಡಿ: ನಡುನೀರಲ್ಲಿ ಕೈ ಬಿಟ್ಟಿದ್ದಾರೆ- ಮಾಧುಸ್ವಾಮಿ ಕಿಡಿ

ಉತ್ತರ ಕನ್ನಡ, ತುಮಕೂರು, ಚಿಕ್ಕಮಗಳೂರಿಗೂ ತಟ್ಟಿದ ಬಿಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಈ ಕ್ಷೇತ್ರದ ಟಿಕೆಟ್​ಗೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಉಭಯ ನಾಯಕರ ಬೆಂಬಲಿಗರು ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿಟಿ ರವಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಗೋ ಬ್ಯಾಕ್ ಶೋಭಾ ಅಭಿಯಾನವನ್ನು ಅವರ ಬೆಂಬಲಿಗರೆ ಮಾಡಿದ್ದರು ಎಂಬ ಆರೋಪವೂ ಇದೆ. ಈ ಮಧ್ಯೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಸ್ಥಳಾಂತರ ಗೊಳಿಸಿದರೂ ಸಿಟಿ ರವಿಗೆ ಟಿಕೆಟ್ ಕೈತಪ್ಪಿದೆ. ಕೋಟ ಶ್ರೀನಿವಾಸ ಪೂಜಾರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಸಿಟಿ ರವಿ ಹಾಗೂ ಅವರ ಬೆಂಬಲಿಗರು ಅಸಮಧಾನಗೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com