ದೇಶ

ಚುನಾವಣಾ ಆಯೋಗದಿಂದ ಚುನಾವಣಾ ಬಾಂಡ್ ನ ಹೊಸ ದತ್ತಾಂಶ ಬಹಿರಂಗ

ಚುನಾವಣಾ ಆಯೋಗದಿಂದ ಚುನಾವಣಾ ಬಾಂಡ್ ನ ಹೊಸ ದತ್ತಾಂಶ ಬಹಿರಂಗ
ಚುನಾವಣಾ ಆಯೋಗ — Election commission
Published On :

ನವದೆಹಲಿ: ಚುನಾವಣಾ ಆಯೋಗ ಇಂದು ಚುನಾವಣಾ ಬಾಂಡ್ ಗಳ ಹೊಸ ದತ್ತಾಂಶವನ್ನು ಬಹಿರಂಗಗೊಳಿಸಿದೆ. ಸುಪ್ರೀಂಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದ್ದ ಮಾಹಿತಿಯನ್ನು ಆಯೋಗ ಈಗ ಬಹಿರಂಗಪಡಿಸಿದೆ.

2019 ರ ಏ.12 ಕ್ಕಿಂತಲೂ ಹಿಂದಿನ ದತ್ತಾಂಶ ಇದಾಗಿದೆ ಎಂದು ತಿಳಿದುಬಂದಿದೆ. 2019 ರ ಏ.12ರ ನಂತರದ ಅವಧಿಯ ಚುನಾವಣಾ ಬಾಂಡ್ ವಿವರಗಳನ್ನು ಕಳೆದ ವಾರ ಆಯೋಗ ಬಿಡುಗಡೆ ಮಾಡಿತ್ತು. ಏಪ್ರಿಲ್ 12, 2019 ರ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ನಿರ್ದೇಶನದಂತೆ ರಾಜಕೀಯ ಪಕ್ಷಗಳು ಸೀಲ್ಡ್ ಕವರ್‌ನಲ್ಲಿ ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಲ್ಲಿಸಿವೆ ಎಂದು ಚುನಾವಣಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

"ರಾಜಕೀಯ ಪಕ್ಷಗಳಿಂದ ಪಡೆದ ಡೇಟಾವನ್ನು ಸೀಲ್ ಮಾಡಿದ ಕವರ್‌ಗಳನ್ನು ತೆರೆಯದೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಲಾಗಿದೆ. ಮಾರ್ಚ್ 15, 2024 ರಂದು ಸುಪ್ರೀಂ ಕೋರ್ಟ್‌ನ ಆದೇಶದ ಅನುಸಾರವಾಗಿ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ ಭೌತಿಕ ಪ್ರತಿಗಳನ್ನು ಡಿಜಿಟೈಸ್ ಮಾಡಿದ ದಾಖಲೆಯೊಂದಿಗೆ ಹಿಂದಿರುಗಿಸಿದೆ. ಭಾರತೀಯ ಚುನಾವಣಾ ಆಯೋಗ ಇಂದು ತನ್ನ ವೆಬ್‌ಸೈಟ್‌ನಲ್ಲಿ ಚುನಾವಣಾ ಬಾಂಡ್‌ಗಳ ಕುರಿತು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿಯಿಂದ ಡಿಜಿಟೈಸ್ ಮಾಡಿ ಸ್ವೀಕರಿಸಿದ ಡೇಟಾವನ್ನು ಅಪ್‌ಲೋಡ್ ಮಾಡಿದೆ" ಎಂದು ಆಯೋಗ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.