ಉತ್ತರ ಪ್ರದೇಶ: ದೇವಸ್ಥಾನದಲ್ಲಿ ಲಾಡುಗಳಿಗಾಗಿ ನೂಕು ನುಗ್ಗಲು: 20 ಮಂದಿ ಗಾಯ

ದೇವಾಲಯವೊಂದರಲ್ಲಿ ಲಾಡು ಪಡೆಯಲು ಭಕ್ತರು ಮುಗಿಬಿದ್ದಾಗ ಉಂಟಾದ ಕಾಲ್ತುಳಿತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ದೇವಾಲಯವೊಂದರಲ್ಲಿ ಲಾಡು ಪಡೆಯಲು ಭಕ್ತರು ಮುಗಿಬಿದ್ದಾಗ ಉಂಟಾದ ಕಾಲ್ತುಳಿತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರ್ಸಾನಾದ ರಾಧಾ ರಾಣಿ ದೇವಸ್ಥಾನದಲ್ಲಿ ಹೋಳಿ ಪೂರ್ವ ಆಚರಣೆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಲಾಡು ಪಡೆಯಲು ಮುಗಿ ಬಿದ್ದಾಗ ರೇಲಿಂಗ್ ಕುಸಿದು ಬಿದ್ದಿದೆ. ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ದೇವಸ್ಥಾನದ ಅರ್ಚಕರು ಸೋಮವಾರ ತಿಳಿಸಿದ್ದಾರೆ. ಘಟನೆಯ ನಂತರ ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು ಮತ್ತು ಅವರಲ್ಲಿ ಹೆಚ್ಚಿನವರು ಮುರಿತಕ್ಕೆ ಒಳಗಾಗಿದ್ದಾರೆ ಎಂದು ಆರೋಗ್ಯ ಕೇಂದ್ರದ ಪ್ರಭಾರಿ ಡಾ.ಮನೋಜ್ ವಶಿಷ್ಠ ತಿಳಿಸಿದ್ದಾರೆ.

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಜನಸಂದಣಿಯನ್ನು ನಿಯಂತ್ರಿಸಿ ದೇವರ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಯಿತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com