ಬಿಹಾರದ 17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, 16 ಸ್ಥಾನಗಳಲ್ಲಿ ಜೆಡಿಯು, ಐದರಲ್ಲಿ ಎಲ್‌ಜೆಪಿ ಸ್ಪರ್ಧೆ

ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿಯು 16 ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಒಪ್ಪಂದವನ್ನು ಸೋಮವಾರ ಅಂತಿಮಗೊಳಿಸಿದೆ. ರಾಜ್ಯದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿಯು 16 ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 5 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಹಿಂದೂಸ್ತಾನಿ ಅವಾಮ್ ಮೋರ್ಚಾ(HAM) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ(RLM) ತಲಾ ಒಂದು ಸ್ಥಾನದಲ್ಲಿ ಕಣಕ್ಕಿಳಿಯಲಿವೆ.

ಬಿಹಾರದಲ್ಲಿ ಎನ್‌ಡಿಎ ಬಿಜೆಪಿ, ಜೆಡಿ(ಯು), ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ರಾಮ್ ವಿಲಾಸ್), ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಅವರ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ(ಆರ್‌ಎಲ್‌ಜೆಪಿ), ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ(ಎಚ್‌ಎಎಂ) ಮತ್ತು ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹಾ ಅವರ ರಾಷ್ಟ್ರೀಯ ಲೋಕ ಮೋರ್ಚಾ(RLM) ಒಳಗೊಂಡಿದೆ.

2019ರಲ್ಲಿ ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎ 39 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 17, ಜೆಡಿಯು 16 ಮತ್ತು ಎಲ್‌ಜೆಪಿ 6 ಸ್ಥಾನಗಳನ್ನು ಗೆದ್ದಿತ್ತು.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಬಿಹಾರ: ಜನವಿಶ್ವಾಸ ಯಾತ್ರೆ ವೇಳೆ ತೇಜಸ್ವಿ ಯಾದವ್ ಬೆಂಗಾವಲು ವಾಹನ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

ಬಿಹಾರದ ಎನ್‌ಡಿಎ ಸೀಟು ಹಂಚಿಕೆ ಒಪ್ಪಂದದಲ್ಲಿ ಹಾಜಿಪುರ ಕ್ಷೇತ್ರವನ್ನು ಚಿರಾಗ್ ಪಾಸ್ವಾನ್ ಅವರ ಪಕ್ಷಕ್ಕೆ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com