6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಬಂಗಾಳ ಪೊಲೀಸ್ ಮುಖ್ಯಸ್ಥರ ವರ್ಗಾವಣೆಗೊಳಿಸಿ ಚುನಾವಣಾ ಆಯೋಗ ಆದೇಶ

ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ನಿರ್ದೇಶನಗಳನ್ನು ನೀಡಿದೆ.
ಕೇಂದ್ರ ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ನಿರ್ದೇಶನಗಳನ್ನು ನೀಡಿದೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಮಾಡಿ ಚುನಾವಣಾ ಆಯೋಗ ಆದೇಶಿಸಿದೆ.

ಇದಲ್ಲದೆ, ಆಯಾ ಮುಖ್ಯಮಂತ್ರಿಗಳ ಕಛೇರಿಗಳಲ್ಲಿ ಉಸ್ತುವಾರಿ ವಹಿಸಿದ್ದ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನು ಸಹ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಚುನಾವಣಾ ಆಯೋಗ
ಚುನಾವಣಾ ಆಯೋಗ ಯಾವಾಗಲೂ ಪಾರದರ್ಶಕತೆಯ ಪರವಾಗಿದೆ: ಚುನಾವಣಾ ಬಾಂಡ್ ಬಗ್ಗೆ ರಾಜೀವ್ ಕುಮಾರ್

ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು(ಡಿಜಿಪಿ) ಸಹ ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಮೂಲಗಳ ಪ್ರಕಾರ, ಬೃಹನ್‌ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹಲವು ಹೆಚ್ಚುವರಿ ಆಯುಕ್ತರು ಹಾಗೂ ಉಪ ಆಯುಕ್ತರನ್ನು ವರ್ಗಾವಣೆ ಮಾಡಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ದೇಶಾದ್ಯಂತ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಈ ಕ್ರಮ ತೆಗೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com