ಸಚಿವರಾಗಿ ಪೊನ್ಮುಡಿ ನೇಮಿಸಲು ರಾಜ್ಯಪಾಲ ಆರ್.ಎನ್.ರವಿ ನಿರಾಕರಣೆ; 'ಸುಪ್ರೀಂ' ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯಪಾಲರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ನಿರಾಕರಿಸಿದ್ದರು.
ರಾಜ್ಯಪಾಲ ಆರ್.ಎನ್.ರವಿ
ರಾಜ್ಯಪಾಲ ಆರ್.ಎನ್.ರವಿ

ನವದೆಹಲಿ: ಡಿಎಂಕೆಯ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಶಿಫಾರಸಿನಂತೆ ಸಚಿವರನ್ನಾಗಿ ನೇಮಿಸಲು ರಾಜ್ಯಪಾಲ ಆರ್‌ಎನ್‌ ರವಿ ಅವರು ನಿರಾಕರಿಸಿದ್ದು, ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಸಮ್ಮತಿಸಿದೆ.

ರಾಜ್ಯಪಾಲರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ನಿರಾಕರಿಸಿದ್ದರು ಮತ್ತು ಇದು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ತಮಿಳುನಾಡು ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರ ಮನವಿಯನ್ನು ಪರಿಗಣಿಸಿದ್ದು, ಈ ವಿಷಯದಲ್ಲಿ ಸ್ವಲ್ಪ ತುರ್ತುಸ್ಥಿತಿಯಿದ್ದು, ಅದನ್ನು ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯಪಾಲ ಆರ್.ಎನ್.ರವಿ
ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಭಾಷಣ ತಿರಸ್ಕರಿಸಿ ರಾಷ್ಟ್ರಗೀತೆಗೂ ಮುನ್ನ ಹೊರ ನಡೆದ ರಾಜ್ಯಪಾಲ ರವಿ

“ದಯವಿಟ್ಟು ಈ ಕುರಿತ ವಿವರಣೆಯನ್ನು ನನಗೆ ಇಮೇಲ್ ಮೂಲಕ ಕಳುಹಿಸಿ. ನಾನು ಇಮೇಲ್ ಅನ್ನು ಪರಿಶೀಲಿಸುತ್ತೇನೆ ಎಂದು ಸಿಜೆಐ, ಸಿಂಘ್ವಿಗೆ ಹೇಳಿದರು.

ಪೊನ್ಮುಡಿ ನೇಮಕ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, ಪೊನ್ಮುಡಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್, ಪೊನ್ಮುಡಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಮಧ್ಯಂತರ ಆದೇಶ ನೀಡಿದೆಯಷ್ಟೇ ಎಂದು ಹೇಳಿದ್ದರು.

ಇತ್ತೀಚೆಗೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪೊನ್ಮುಡಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ತಮಿಳುನಾಡು ಸಿಎಂ ಶಿಫಾರಸು ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com