ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮಧ್ಯರಾತ್ರಿ ಸಂಭವಿಸಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿತ- ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನಿರ್ಮಾಣ ಹಂತದ ಕಟ್ಟಡ ಕುಸಿತ- ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮಧ್ಯರಾತ್ರಿ ಸಂಭವಿಸಿದೆ.

ಭಾನುವಾರ ತಡರಾತ್ರಿ, ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಾಗನ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರನ್ನು ರಕ್ಷಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಸ್ಥಳದಲ್ಲಿವೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ- ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ, ಇಬ್ಬರು ಸಾವು, 20 ಕಾರ್ಮಿಕರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪ್ರಕಾರ, ಕಟ್ಟಡದ ಅವಶೇಷಗಳಿಂದ ಇದುವರೆಗೆ 14 ಜನರನ್ನು ರಕ್ಷಿಸಲಾಗಿದೆ. ಕೆಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನಾ ಸ್ಥಳದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಉಪಸ್ಥಿತರಿದ್ದರು. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತುಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com