ಡಿಜಿಪಿಯಾಗಿ ಸಂಜಯ್ ಮುಖರ್ಜಿ ನೇಮಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಇಸಿ ಆದೇಶ

ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖರ್ಜಿ ಅವರನ್ನು ಡಿಜಿಪಿಯಾಗಿ ನೇಮಿಸುವಂತೆ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಮುಖರ್ಜಿ ಅವರನ್ನು ಡಿಜಿಪಿಯಾಗಿ ನೇಮಿಸುವಂತೆ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿದ್ದ ಚುನಾವಣಾ ಆಯೋಗ, ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರನ್ನು ಸಹ ಹುದ್ದೆಯಿಂದ ಬಿಡುಗಡೆಗೊಳಿಸಿ, ಅವರ ಸ್ಥಾನಕ್ಕೆ ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಿ ಸೋಮವಾರ ಆದೇಶ ನೀಡಿತ್ತು.

ಆದರೆ ಚುನಾವಣಾ ಆಯೋಗ, ವಿವೇಕ್ ಸಹಾಯ್ ಅವರ ಹೆಸರನ್ನು ಪಶ್ಚಿಮ ಬಂಗಾಳ ಡಿಜಿಪಿ ಹುದ್ದೆಗೆ ಹೆಸರಿಸಿದ 24 ಗಂಟೆಗಳಲ್ಲೇ ಅವರನ್ನು ತೆಗೆದುಹಾಕಿ, ಅವರ ಸ್ಥಾನಕ್ಕೆ ಈಗ ಸಂಜಯ್ ಮುಖರ್ಜಿ ಅವರನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಾಂದರ್ಭಿಕ ಚಿತ್ರ
6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಬಂಗಾಳ ಪೊಲೀಸ್ ಮುಖ್ಯಸ್ಥರ ವರ್ಗಾವಣೆಗೊಳಿಸಿ ಚುನಾವಣಾ ಆಯೋಗ ಆದೇಶ

ಸಹಾಯ್ ಅವರ ನೇಮಕವು ಅವರ ಹಿರಿತನವನ್ನು ಆಧರಿಸಿದೆ. ಆದರೆ ಲೋಕಸಭೆ ಚುನಾವಣೆ ಮುಗಿಯುವ ಮೊದಲೇ ಅವರು ಮೇ ಕೊನೆಯ ವಾರದಲ್ಲಿ ನಿವೃತ್ತರಾಗಲಿರುವುದರಿಂದ, ಚುನಾವಣಾ ಆಯೋಗ ಮುಖರ್ಜಿ ಅವರನ್ನು ಡಿಜಿಪಿಯಾಗಿ ನೇಮಕ ಮಾಡುವಂತೆ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸೂಚಿಸಿದೆ.

1989ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಮುಖರ್ಜಿ ಅವರು, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ಹುದ್ದೆಗೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿದ ಮೂವರು ಅಧಿಕಾರಿಗಳ ಪಟ್ಟಿಯಲ್ಲಿ ಎರಡನೇ ವ್ಯಕ್ತಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com