ಜೆಎಂಎಂ ತೊರೆದು ಬಿಜೆಪಿ ಸೇರಿದ ಶಿಬು ಸೊರೆನ್ ಸೊಸೆ ಸೀತಾ ಸೊರೆನ್

ಜೆಎಂಎಂಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಸೀತಾ ಸೊರೆನ್ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.
ಸೀತಾ ಸೊರೆನ್
ಸೀತಾ ಸೊರೆನ್

ನವದೆಹಲಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ಗೆ ತೀವ್ರ ಹಿನ್ನೆಡೆಯಾಗಿದ್ದು, ಶಿಬು ಸೊರೆನ್ ಅವರ ಹಿರಿಯ ಸೊಸೆ ಹಾಗೂ ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕಿ ಸೀತಾ ಸೊರೆನ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದಾರೆ.

ಜೆಎಂಎಂಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಸೀತಾ ಸೊರೆನ್ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಲಕ್ಷ್ಮೀಕಾಂತ್ ಬಾಜಪೇಯ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು.

ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜೀನಾಮೆ ನೀಡುವ ಸಂದರ್ಭದಲ್ಲಿ ಹೊಸ ಮುಖ್ಯಮಂತ್ರಿ ಹುದ್ದೆಗೆ ಅವರ ಪತ್ನಿ ಕಲ್ಪನಾ ಸೊರೆನ್ ಅವರ ಹೆಸರು ಕೇಳಿಬಂದಾಗ ಸೀತಾ ಸೊರೆನ್ ಅವರು ತೀವ್ರವಾಗಿ ವಿರೋಧಿಸಿದ್ದರು ಮತ್ತು ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಸೀತಾ ಸೊರೆನ್
ಜೆಎಂಎಂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶಿಬು ಸೊರೆನ್ ಸೊಸೆ ರಾಜೀನಾಮೆ!

ನಂತರ ಚಂಪೈ ಸೊರೆನ್ ಸರ್ಕಾರ ರಚನೆಯಾದ ನಂತರ ಸಂಪುಟ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಳ್ಳದ ಕಾರಣ ಮತ್ತಷ್ಟು ಅಸಮಾಧಾನಗೊಂಡಿದ್ದರು.

ಜೆಎಂಎಂ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದ ಸೀತಾ ಅವರು ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಹಿರಿಯ ಸೊಸೆ ಮತ್ತು ದಿವಂಗತ ಜೆಎಂಎಂ ನಾಯಕ ದುರ್ಗಾ ಸೊರೆನ್ ಅವರ ಪತ್ನಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com