ಪುಟಿನ್ ಜೊತೆ ಮಾತುಕತೆ ಬಳಿಕ ಝೆಲೆನ್ಸ್ಕಿಗೆ ಕರೆ; ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಬೆಂಬಲ!

ಪ್ರಧಾನಿ ನರೇಂದ್ರ ಮೋದಿ ಯುಕ್ರೇನ್ ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗೆ ಕರೆ ಮಾಡಿ ಮಾತನಾಡಿದ್ದು, ಭಾರತ ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ನಡೆಯುತ್ತಿರುವ ಎಲ್ಲಾ ಪ್ರಯತ್ನಗಳನ್ನೂ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿOnline desk
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಯುಕ್ರೇನ್ ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗೆ ಕರೆ ಮಾಡಿ ಮಾತನಾಡಿದ್ದು, ಭಾರತ ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ನಡೆಯುತ್ತಿರುವ ಎಲ್ಲಾ ಪ್ರಯತ್ನಗಳನ್ನೂ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ದೂರವಾಣಿ ಕರೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಮುಂದಿನ ಮಾರ್ಗವಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ಕರೆ ನೀಡಿದರು. ಪ್ರಧಾನಿ ಮೋದಿ ಈ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೂ ಸಹ ಭಾರತದ ಈ ನಿಲುವನ್ನು ತಿಳಿಸಿದ್ದರು.

ನರೇಂದ್ರ ಮೋದಿ
ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

"ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಅಧ್ಯಕ್ಷ @ZelenskyyUa ಅವರೊಂದಿಗೆ ಉತ್ತಮ ಸಂವಾದವನ್ನು ನಡೆಸಿದೆ. ಶಾಂತಿಗಾಗಿ ಎಲ್ಲಾ ಪ್ರಯತ್ನಗಳಿಗೆ ಮತ್ತು ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರ ಅಂತ್ಯವನ್ನು ತರಲು ಭಾರತದ ನಿರಂತರ ಬೆಂಬಲವನ್ನು ತಿಳಿಸಿದೆ. ನಮ್ಮ ಜನಕೇಂದ್ರಿತ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟ ಮಾನವೀಯ ಸಹಾಯವನ್ನು ಭಾರತವು ಮುಂದುವರಿಸುತ್ತದೆ" ಎಂದು ಮೋದಿ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಅವರು ಬುಧವಾರ ಪುಟಿನ್ ಅವರೊಂದಿಗೆ ಮಾತನಾಡಿದರು ಮತ್ತು ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆಯಾದ ಅವರನ್ನು ಅಭಿನಂದಿಸಿದರು. ಉಭಯ ನಾಯಕರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದಾಗ ಉಕ್ರೇನ್‌ನ ಜನರಿಗೆ ಭಾರತದ ನಿರಂತರ ಮಾನವೀಯ ಸಹಾಯವನ್ನು ಝೆಲೆನ್ಸ್ಕಿ ಶ್ಲಾಘಿಸಿದರು ಎಂದು ಹೇಳಿಕೆಯೊಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com