ರಾಮೇಶ್ವರಂ ಕೆಫೆ ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದ ಬಗ್ಗೆ ಯಾವುದೇ ಮಾಹಿತಿ ಇಲ್ಲ: ತಮಿಳುನಾಡು ಪೊಲೀಸರು

ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದ ಬಗ್ಗೆ ತಮಗೆ ಯಾವುದೇ ಗುಪ್ತಚರ ಮಾಹಿತಿ ಅಥವಾ ಇತರೆ ಮಾಹಿತಿ ಬಂದಿಲ್ಲ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.
ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆTNIE

ಕೃಷ್ಣಗಿರಿ: ‘ರಾಮೇಶ್ವರಂ ಬಾಂಬರ್‌ಗೆ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ನೀಡಲಾಗಿದೆ’ ಎಂಬ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಪೊಲೀಸರು, ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದ ಬಗ್ಗೆ ತಮಗೆ ಯಾವುದೇ ಗುಪ್ತಚರ ಮಾಹಿತಿ ಅಥವಾ ಇತರೆ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.

ಟಿಎನ್‌ಐಇಯೊಂದಿಗೆ ಮಾತನಾಡಿದ ಪೊಲೀಸ್ ಮಹಾನಿರೀಕ್ಷಕ(ಪಶ್ಚಿಮ ವಲಯ) ಕೆ ಭವಾನೇಶ್ವರಿ ಮತ್ತು ಕೃಷ್ಣಗಿರಿ ಎಸ್‌ಪಿ ಪಿ ತಂಗದುರೈ ಅವರು ಕೃಷ್ಣಗಿರಿ ಅರಣ್ಯದಲ್ಲಿ ಬಾಂಬರ್ ತರಬೇತಿ ಪಡೆದಿರುವ ಬಗ್ಗೆ ಯಾವುದೇ ಮಾಹಿತಿ ಅಥವಾ ಗುಪ್ತಚರ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಹಿಂದೆ ತಮಿಳುನಾಡಿನ ಜನರ ಕೈವಾಡವಿದೆ ಎಂದು ಆರೋಪಿಸಿದ್ದರು.

ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ ಸ್ಫೋಟಕ್ಕೂ ತಮಿಳುನಾಡಿಗೂ ನಂಟು ಹೇಳಿಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕೇಸ್ ದಾಖಲು

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ರಾಜ್ಯದ ಇತರ ರಾಜಕೀಯ ನಾಯಕರು ಶೋಭಾ ಕರಂದ್ಲಾಜೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 9 ಜನ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com