ಹರಿಯಾಣ: ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ

ರೆವಾರಿ ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ
ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ

ರೆವಾರಿ (ಹರಿಯಾಣ): ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಂತ್ರಸ್ತರಲ್ಲಿ ಮೂವರು ಮಂಗಳವಾರ ರಾತ್ರಿ ರೋಹ್ಟಕ್‌ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮತ್ತೊಬ್ಬರು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇನ್‌ಸ್ಪೆಕ್ಟರ್ ಜಗದೀಶ್ ಚಂದರ್ ತಿಳಿಸಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ಅಜಯ್ (32), ವಿಜಯ್ (37), ರಾಮು (27), ರಾಜೇಶ್ (38) ಎಂದು ಗುರುತಿಸಲಾಗಿದೆ.

ಧಾರುಹೆರಾ ಕೈಗಾರಿಕಾ ಪ್ರದೇಶದಲ್ಲಿನ ಉತ್ಪಾದನಾ ಘಟಕದಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 40 ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ
ಉತ್ತರ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಸಾವು

ಗಾಯಗೊಂಡವರಲ್ಲಿ 10 ಕಾರ್ಮಿಕರನ್ನು ರೆವಾರಿ ಟ್ರಾಮಾ ಸೆಂಟರ್‌ಗೆ, 20ಕ್ಕೂ ಹೆಚ್ಚು ಕಾರ್ಮಿಕರನ್ನು ಪಿಜಿಐಎಂಎಸ್ ರೋಹ್ಟಕ್‌ಗೆ, ನಾಲ್ವರನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಮತ್ತು ಇತರರನ್ನು ಇಲ್ಲಿನ ಧಾರುಹೆರಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಐವರು ಕಾರ್ಮಿಕರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬಾಯ್ಲರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಇತರರ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದರು. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕೂಲಿ ಕಾರ್ಮಿಕ ರಾಜ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಘಟನೆ ಕುರಿತು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com