ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಕಾರ: ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಸಮನ್ಸ್ ನೀಡಿದ ಇಡಿ

ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿದ್ದಾರೆ.
ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಲು
ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಲು

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿದ್ದಾರೆ.

ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲು ಇಡಿ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿದ್ದರು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಮುಖ್ಯಸ್ಥ ಕೇಜ್ರಿವಾಲ್ ಅವರಿಗೆ ಇಡಿ ಈ ಹಿಂದೆ ಹಲವು ಸಮನ್ಸ್‌ಗಳನ್ನು ಜಾರಿ ಮಾಡಿದ್ದರೂ ಅವರು ವಿಚಾರಣೆಗೆ ಹಾಜರಾಗಿಲ್ಲ.

ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಲು
ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

ಇಂದು ಮಧ್ಯಾಹ್ನ ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠ, ಕೇಜ್ರಿವಾಲ್‌ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು.

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಕೊಳ್ಳದಂತೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಂತದಲ್ಲಿ ಮಧ್ಯಂತರ ಪರಿಹಾರ ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com