ಲೋಕಸಭೆ, ವಿಧಾನಸಭೆ ಚುನಾವಣೆ: ಒಡಿಶಾದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ, ಬಿಜೆಡಿ ಜೊತೆ ಮೈತ್ರಿ ಇಲ್ಲ

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭುವನೇಶ್ವರ: ಒಡಿಶಾದಲ್ಲಿ ಚುನಾವಣಾ ಪೂರ್ವ ಮೈತ್ರಿಗಾಗಿ ಆಡಳಿತಾರೂಢ ಬಿಜೆಡಿಯೊಂದಿಗೆ ವಾರಗಳ ಕಾಲ ನಡೆದ ಮಾತುಕತೆ ಕೊನೆಗೂ ವಿಫಲವಾಗಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಘೋಷಿಸಿದೆ.

ಒಡಿಶಾ ಬಿಜೆಪಿ ತಂಡ ನವದೆಹಲಿಯಲ್ಲಿ ಬೀಡುಬಿಟ್ಟಿದ್ದು, ಕಳೆದ ನಾಲ್ಕು ದಿನಗಳಿಂದ ಬಿಜು ಜನತಾ ದಳ(ಬಿಜೆಡಿ) ಜೊತೆ ಸಂಭಾವ್ಯ ಸೀಟು ಹಂಚಿಕೆ ಕುರಿತು ಕೇಂದ್ರ ನಾಯಕರೊಂದಿಗೆ ಸಭೆ ನಡೆಸುತ್ತಿತ್ತು.

ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 21 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು 147 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಒಡಿಶಾ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಾಲ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆ: ತಮಿಳುನಾಡಿನ 9 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಅಣ್ಣಾಮಲೈ, ತಮಿಳಿಸೈಗೆ ಟಿಕೆಟ್

ಮೋದಿ ಸರ್ಕಾರದ ಅನೇಕ ಕಲ್ಯಾಣ ಯೋಜನೆಗಳು "ಒಡಿಶಾದಲ್ಲಿ ನೆಲವನ್ನು ತಲುಪುತ್ತಿಲ್ಲ. ಇದರಿಂದಾಗಿ ಒಡಿಶಾದ ಬಡ ಸಹೋದರಿಯರು ಮತ್ತು ಸಹೋದರರು ಕೇಂದ್ರದ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿಲ್ಲ" ಎಂದು ಸಮಾಲ್ ಎಕ್ಸ್‌ನಲ್ಲಿ ಬರೆದಿದ್ದಾರೆ.

"ಒಡಿಶಾ-ಗುರುತು, ಒಡಿಶಾ-ಹೆಮ್ಮೆ ಮತ್ತು ಒಡಿಶಾದ ಜನರ ಹಿತಾಸಕ್ತಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ನಮಗೆ ಕಳವಳವಿದೆ" ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಮೇ 13, 20, 25 ಮತ್ತು ಜೂನ್ 1 ರಂದು ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com