ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ: ಶರದ್ ಪವಾರ್ ಎಚ್ಚರಿಕೆ

ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್, ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಎಚ್ಚರಿಸಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಬಾರಾಮತಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಶುಕ್ರವಾರ ಖಂಡಿಸಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್, ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು, ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್, ತುರ್ತು ಪರಿಸ್ಥಿತಿಯಲ್ಲಿ ಜನ ತಮ್ಮ ಶಕ್ತಿ ಪ್ರದರ್ಶಿಸಿದ ರೀತಿಯಲ್ಲೇ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಶಕ್ತಿ ತೋರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕೇಜ್ರಿವಾಲ್ ಅವರ ಬಂಧನವನ್ನು ಉಲ್ಲೇಖಿಸಿದ ಪವಾರ್, ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಫೆಡರಲ್ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಶರದ್ ಪವಾರ್
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ 'ರಾಜಕೀಯ ಕುತಂತ್ರ', ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆಂದ AAP

"ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಖಾತೆಗಳು ಸ್ಥಗಿತಗೊಂಡಿದ್ದರಿಂದ ಚುನಾವಣಾ ಪ್ರಚಾರಕ್ಕಾಗಿ ಹಣಕಾಸು ನಿರ್ವಹಣೆಗೆ ಹೊಡೆತ ಬಿದ್ದಿದೆ. ಇದು ಹಳೆಯ ಪಕ್ಷವನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ಪ್ರಯತ್ನ ಎಂಬುದನ್ನು ತೋರಿಸುತ್ತದೆ. ಈ ಹಿಂದೆ ಯಾವತ್ತೂ ಈ ರೀತಿಯ ಕ್ರಮ ಕೈಗೊಂಡಿರಲಿಲ್ಲ" ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಇಡಿ ಗುರುವಾರ ಬಂಧಿಸಿದ್ದು, ಅವರ ಬಂಧನವನ್ನು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ನಾಯಕರನ್ನು ಖಂಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com