ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಶುಕ್ರವಾರ ಹೇಳಿದ್ದಾರೆ.
ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ
ಅರವಿಂದ್ ಕೇಜ್ರಿವಾಲ್ ನಿವಾಸದ ಹೊರಗಡೆ ಜಮಾಯಿಸಿರುವ ಪೊಲೀಸರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಶುಕ್ರವಾರ ಹೇಳಿದ್ದಾರೆ.

ಎಎಪಿ ಮುಖ್ಯಸ್ಥರ ನಿವಾಸಕ್ಕೆ ಆಗಮಿಸಿದ ದೆಹಲಿ ಸಚಿವರು, ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಭೇಟಿಯಾಗದಂತೆ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನಿಸಿದರು.

ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ
ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ಕೇಜ್ರಿವಾಲ್ ದೆಹಲಿಯ ಜನರಿಗಾಗಿ ನಿರಂತರವಾಗಿ ಕೆಲಸ ಮಾಡಿದ್ದಾರೆ. ಅವರ ಕುಟುಂಬವನ್ನು ಭೇಟಿ ಮಾಡಲು ಬಂದಿದ್ದೇನೆ ಆದರೆ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಅವರ ಕುಟುಂಬವನ್ನು ಭೇಟಿಯಾಗದಂತೆ ಯಾವ ಕಾನೂನಿನ ಅಡಿಯಲ್ಲಿ ನನ್ನನ್ನು ತಡೆಹಿಡಿಯಲಾಗಿದೆ?" ರಾಯ್ ಸುದ್ದಿಗಾರರಿಗೆ ಹೇಳಿದರು.

ಈ ಮಧ್ಯೆ ಎಎಪಿ ಕಾರ್ಯಕರ್ತರು ಎಎಪಿ ಕಚೇರಿಯ ಹೊರಗೆ ಜಮಾಯಿಸಿ ದೆಹಲಿ ಮುಖ್ಯಮಂತ್ರಿಗೆ ತಮ್ಮ ಬೆಂಬಲ ನೀಡಿದರು. ಎಎಪಿ ಕಚೇರಿಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಮುನ್ನಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ನಾಯಕಿ ಅತಿಶಿ, ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಸಂಚಾಲಕರನ್ನು ಬಂಧಿಸಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಅರವಿಂದ್ ಕೇಜ್ರಿವಾಲ್ ಬಂಧನ ಬಿಜೆಪಿಯ ರಾಜಕೀಯ ಷಡ್ಯಂತ್ರವಾಗಿದೆ ಎಂದರು.

ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ
ಜೈಲಿನಿಂದಲೇ ಸಿಎಂ ಆಡಳಿತ! ಅರವಿಂದ್ ಕೇಜ್ರಿವಾಲ್ ಉತ್ತರಾಧಿಕಾರಿ ಯಾರು: ಪತ್ನಿ ಸುನೀತಾಗೆ ಮುಖ್ಯಮಂತ್ರಿ ಸ್ಥಾನ?

ಸುಪ್ರೀಂ ಕೋರ್ಟ್ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಪಕ್ಷಕ್ಕೆ ಇದೆ. ಲೋಕಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಚಾರ ಮಾಡಬಾರದು ಎಂದು ಬಿಜೆಪಿ ಬಯಸಿದೆ. ನಾವು ಇಂಡಿಯಾ ಮೈತ್ರಿಕೂಟ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇವೆ, ಅವರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com