ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ವಿಪ್ ಧಿಕ್ಕರಿಸಿ ಶಾಸಕತ್ವದಿಂದ ಅನರ್ಹಗೊಂಡಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ
ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ವಿಪ್ ಧಿಕ್ಕರಿಸಿ ಶಾಸಕತ್ವದಿಂದ ಅನರ್ಹಗೊಂಡಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರಿದರು.

ಮಾಜಿ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಿದ ಠಾಕೂರ್, ಅವರ ಪಕ್ಷ ಸೇರ್ಪಡೆಯಿಂದ ಬಿಜೆಪಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಇದು ಜನರ ಕೋಪಕ್ಕೆ ಕಾರಣವಾಗಿದೆ ಎಂದರು.

ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ
ಹಿಮಾಚಲ ಪ್ರದೇಶ ಕಾಂಗ್ರೆಸ್ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಈ ನಾಯಕರು ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದರು. ಇದು ಕಾಂಗ್ರೆಸ್ ವಿರುದ್ಧ "ಸಾರ್ವಜನಿಕ ಕೋಪ" ವನ್ನು ಪ್ರತಿಬಿಂಬಿಸುತ್ತದೆ ಎಂದು ಠಾಕೂರ್ ಹೇಳಿದರು.

ಅನರ್ಹ ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com