ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಕಸ್ಟಡಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ಪಟ್ಟಿ ಮಾಡಲು ಮತ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದ್ದು, ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಕಸ್ಟಡಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ಪಟ್ಟಿ ಮಾಡಲು ಮತ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರ ಕಾನೂನು ತಂಡ ರಜೆಯ ದಿನವಾದ ಶನಿವಾರ ದೆಹಲಿ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಮನಮೋಹನ್ ಅವರ ಮುಂದೆ ಅರ್ಜಿ ಸಲ್ಲಿಸಿತು. ಆದರೆ ಅದನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ನ್ಯಾಯಾಧೀಶರು ನಿರಾಕರಿಸಿದರು.

ಹೋಳಿ ರಜೆ ಮತ್ತು ನಾಳೆ ಭಾನುವಾರ, ರಜೆಯ ದಿನವಾಗಿರುವ ಕಾರಣ ದೆಹಲಿ ಹೈಕೋರ್ಟ್ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಬಂದ್ ಇರುವುದರಿಂದ, ಕೇಜ್ರಿವಾಲ್ ಅವರ ಅರ್ಜಿಯನ್ನು ಮಾರ್ಚ್ 27, ಬುಧವಾರದಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಅರವಿಂದ್ ಕೇಜ್ರಿವಾಲ್
'ನನ್ನನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ, ಶೀಘ್ರದಲ್ಲೇ ಹೊರಬರುತ್ತೇನೆ': ED ಕಸ್ಟಡಿಯಿಂದ ಕೇಜ್ರಿವಾಲ್ ಸಂದೇಶ

ಕೇಜ್ರಿವಾಲ್ ಅವರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಕೋರ್ಟ್ ನಿರಾಕರಿಸಿದ್ದರಿಂದ ಅವರು ಕನಿಷ್ಠ ಮಾರ್ಚ್ 27 ರವರೆಗೆ ಇಡಿ ಕಸ್ಟಡಿಯಲ್ಲಿ ಇರಬೇಕಾಗುತ್ತದೆ. ರೂಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com