ವಾರಣಾಸಿ: ನರೇಂದ್ರ ಮೋದಿ ವಿರುದ್ಧ 2 ಬಾರಿ ಸೋತಿದ್ದ ಅಭ್ಯರ್ಥಿ ಮೂರನೇ ಬಾರಿಗೂ ಸ್ಪರ್ಧೆ

ಲೋಕಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಈ ಹಿಂದೆ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಬಿಜೆಪಿಯ ನರೇಂದ್ರ ಮೋದಿ ಅವರ ವಿರುದ್ಧ ಸೋತಿದ್ದ ಅಭ್ಯರ್ಥಿಗೆ ಮೂರನೇ ಬಾರಿಗೂ ಟಿಕೆಟ್ ನೀಡಲಾಗಿದೆ.
ಅಜಯ್ ರಾಯ್ ಮತ್ತು ಪ್ರಧಾನಿ ಮೋದಿ
ಅಜಯ್ ರಾಯ್ ಮತ್ತು ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಈ ಹಿಂದೆ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಬಿಜೆಪಿಯ ನರೇಂದ್ರ ಮೋದಿ ಅವರ ವಿರುದ್ಧ ಸೋತಿದ್ದ ಅಭ್ಯರ್ಥಿಗೆ ಮೂರನೇ ಬಾರಿಗೂ ಟಿಕೆಟ್ ನೀಡಲಾಗಿದೆ.

ಹೌದು.. ಕಾಂಗ್ರೆಸ್ ಪಕ್ಷದ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಶನಿವಾರ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ವಾರಣಾಸಿ ಕ್ಷೇತ್ರಕ್ಕೆ ಅಜಯ್ ರಾಯ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

ಅಜಯ್ ರಾಯ್ ಮತ್ತು ಪ್ರಧಾನಿ ಮೋದಿ
ದೇಶ ಬದಲಾವಣೆ ಬಯಸುತ್ತಿದೆ, ಮೋದಿ ಸರ್ಕಾರದ ಗ್ಯಾರಂಟಿಗಳು 2004ರಂತೆಯೇ ಟೊಳ್ಳು- CWC ಸಭೆಯಲ್ಲಿ ಖರ್ಗೆ

ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಣೆ ಮಾಡಿತ್ತು. ಆದರೆ ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುವ ಕುರಿತು ಮಾತುಕತೆ ನಡೆದಿತ್ತು. ಆದರೆ ಕೊನೆಗೂ ಅಜಯ್ ರಾಯ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಜಯ್ ರಾಯ್ ಮತ್ತು ಪ್ರಧಾನಿ ಮೋದಿ
'Micro managing backfires': ಮಾಸ್ಕೋ ದಾಳಿ ಕುರಿತು ಪ್ರಧಾನಿ ಮೋದಿ ಆಡಳಿತಕ್ಕೆ Subramanian Swamy ಎಚ್ಚರಿಕೆ

ಯಾರು ಅಜಯ್ ರಾಯ್?

ಉತ್ತರ ಪ್ರದೇಶ ರಾಜ್ಯದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದ ಅವರು ಸಮಾಜವಾದಿ ಪಕ್ಷವನ್ನು ಸಹ ಸೇರಿದ್ದರು. 1996 ರಿಂದ 2007ರ ನಡುವೆ ಮೂರು ಬಾರಿ ಬಿಜೆಪಿಯಿಂದ ಕೋಲಸ್ಲಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು ಅಜಯ್ ರಾಯ್. ಲೋಕಸಭೆ ಟಿಕೆಟ್ ಬಿಜೆಪಿ ನೀಡದ ಕಾರಣ 2009ರಲ್ಲಿ ಸಮಾಜವಾದಿ ಪಕ್ಷ ಸೇರಿದ್ದರು.

ಆದರೆ ಚುನಾವಣೆಯಲ್ಲಿ ಸೋತರು. ಕೋಲಸ್ಲಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದರು. 2012ರಲ್ಲಿ ಕಾಂಗ್ರೆಸ್ ಸೇರಿದ ಅಜಯ್ ರಾಯ್ ಪಿಂಡ್ರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಶಾಸಕರಾಗಿ ಆಯ್ಕೆಯಾದರು. ಆದರೆ 2017ರ ವಿಧಾನಸಭೆ ಚುನಾವಣೆಯಲ್ಲಿ ಸೋತರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com