ಪತ್ನಿಗೆ ಲೋಕಸಭೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದ ಅಸ್ಸಾಂ ಶಾಸಕ ಭರತ್ ಚಂದ್ರ ನಾರಾ

ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಶಾಸಕ ಭರತ್ ಚಂದ್ರ ನಾರಾ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಭರತ್ ಚಂದ್ರ ನಾರಾ
ಭರತ್ ಚಂದ್ರ ನಾರಾ

ಗುವಾಹಟಿ: ಅಸ್ಸಾಂನ ಲಖಿಂಪುರ ಜಿಲ್ಲೆಯ ನವೊಬೋಚಾ ಕಾಂಗ್ರೆಸ್ ಶಾಸಕ ಭರತ್ ಚಂದ್ರ ನಾರಾ ಅವರು ತಮ್ಮ ಪತ್ನಿ ಲೋಕಸಭೆ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಪಡೆಯಲು ವಿಫಲವಾದ ಕಾರಣ ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ಲಖಿಂಪುರ ಲೋಕಸಭಾ ಕ್ಷೇತ್ರಕ್ಕೆ ಉದಯ್ ಶಂಕರ್ ಹಜಾರಿಕಾ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ನಾರಾ ಅವರು ತಮ್ಮ ಪತ್ನಿ ಹಾಗೂ ಮಾಜಿ ಕೇಂದ್ರ ಸಚಿವೆ ರಾನೀ ನಾರಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತದೆ ಎಂಬ ಭರವಸೆ ಹೊಂದಿದ್ದರು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಲಾಗಿದೆ.

ಭರತ್ ಚಂದ್ರ ನಾರಾ
ಮದ್ಯ ಹಗರಣದ ಆರೋಪಿ ಬಸ್ತಾರ್‌ನ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ!

"ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಶಾಸಕ ಭರತ್ ಚಂದ್ರ ನಾರಾ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಒಂದು ಸಾಲಿನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಭಾನುವಾರ, ಅಸ್ಸಾಂ ಕಾಂಗ್ರೆಸ್‌ನ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾರಾ ರಾಜೀನಾಮೆ ನೀಡಿದ್ದಾರೆ.

ಢಕುಖಾನಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ನಾರಾ ಅವರು, 2021 ರಲ್ಲಿ ನವೊಬೊಯಿಚಾದಿಂದ ಆರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾನೀ ನಾರಾ ಅವರು ಲಖಿಂಪುರದಿಂದ ಮೂರು ಬಾರಿ ಸಂಸದರಾಗಿದ್ದಾರೆ ಮತ್ತು ರಾಜ್ಯಸಭಾ ಸದಸ್ಯೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸೇರುವ ಮೊದಲು ಅವರು ಅಸೋಮ್ ಗಣ ಪರಿಷತ್(ಎಜಿಪಿ)ನಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com