ತಮಿಳುನಾಡು: ಈರೋಡ್ ಸಂಸದ ಗಣೇಶಮೂರ್ತಿ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ

ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಸದ ಗಣೇಶಮೂರ್ತಿ
ಸಂಸದ ಗಣೇಶಮೂರ್ತಿ

ಚೆನ್ನೈ: ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅವರ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿದ್ದ ಗಣೇಶಮೂರ್ತಿ ಅವರು ಜಯ ಗಳಿಸಿದ್ದರು. ಸೋಮವಾರ ಮುಂಜಾನೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಅವರು ಕೀಟನಾಶಕ ಸೇವಿಸಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸದ ಗಣೇಶಮೂರ್ತಿ
ಅಕ್ರಮವಾಗಿ ಗಡಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ನನ್ನು ಬಂಧಿಸಿದ ಬಾಂಗ್ಲಾದೇಶ ಸೇನೆ, ಗಡಿಯಲ್ಲಿ ನಡೆದಿದ್ದೇನು?

ಬಳಿಕ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಎಂಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com