ಕೆಸಿಆರ್, ಮಮತಾ, ಕೇಜ್ರಿವಾಲ್ ರಂತಹ ಪ್ರಾದೇಶಿಕ ನಾಯಕರಿಂದ ಮಾತ್ರ ಬಿಜೆಪಿ ಸೋಲಿಸಲು ಸಾಧ್ಯ: ರಾಮರಾವ್

ಕಾಂಗ್ರೆಸ್ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ಮಂಗಳವಾರ ಹೇಳಿದ್ದಾರೆ.
 ಕೆಟಿ ರಾಮರಾವ್
ಕೆಟಿ ರಾಮರಾವ್

ಹೈದರಾಬಾದ್: ದೆಹಲಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಳಾದ ಅರವಿಂದ್ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ, ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಂತಹ ಪ್ರಬಲ ಪ್ರಾದೇಶಿಕ ನಾಯಕರಿಂದ ಮಾತ್ರ ಬಿಜೆಪಿಯನ್ನು ತಡೆಯುವ ಸಾಮರ್ಥ್ಯವಿದೆ. ಕಾಂಗ್ರೆಸ್ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಮರಾವ್, ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ತನ್ನ ಸಾಮರ್ಥ್ಯ ಮತ್ತು ಶಕ್ತಿಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದರು.

ಬಿಜೆಪಿಯನ್ನು ತಡೆಯಬೇಕಾದರೆ ಕೆಸಿಆರ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಅವರಂತಹ ಪ್ರಾದೇಶಿಕ ನಾಯಕರಿಂದ ಮಾತ್ರ ಸಾಧ್ಯ. ಬಿಜೆಪಿಯನ್ನು ತಡೆಯುವಷ್ಟು ಶಕ್ತಿ ಕಾಂಗ್ರೆಸ್‌ಗೆ ಇಲ್ಲ. ಇಂದು ದೇಶದಾದ್ಯಂತ ನೋಡಿದರೆ ಪ್ರಾದೇಶಿಕ ನಾಯಕರೇ ಬಿಜೆಪಿಯನ್ನು ತಡೆಯಲು ಸಮರ್ಥರು ಎಂದು ಗೊತ್ತಾಗುತ್ತದೆ" ಎಂದು ರಾಮರಾವ್ ಹೇಳಿದರು.

 ಕೆಟಿ ರಾಮರಾವ್
ಬಿಆರ್‌ಎಸ್‌ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ರಾಮರಾವ್, ಒಂದು ಕಡೆ ರಾಹುಲ್ ಗಾಂಧಿ(ಪ್ರಧಾನಿ ನರೇಂದ್ರ ಮೋದಿ) ಚೌಕಿದಾರ್ ಚೋರ್ ಹೈ ಎಂದು ಹೇಳಿದರೆ, ಮತ್ತೊಂದೆಡೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮೋದಿಯನ್ನು ತಮ್ಮ ಅಣ್ಣ(ಬಡೇ ಭಾಯ್) ಎಂದು ಬಣ್ಣಿಸುತ್ತಾರೆ ಎಂದರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷ ಬಿಆರ್ ಎಸ್, ಬಿಜೆಪಿಯ ಬಿ ಟೀಮ್ ಎಂದು ಕಾಂಗ್ರೆಸ್ ಅಪ ಪ್ರಚಾರ ಮಾಡಿತು. ಈ ಮೂಲಕ ಬಿಆರ್‌ಎಸ್ ಪಕ್ಷದ ವರ್ಚಸ್ಸನ್ನು ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸಿತು ಎಂದು ರಾಮರಾವ್ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com