ಕೇಜ್ರಿವಾಲ್ ಬಂಧನ ವಿಷಯದ ಬಳಿಕ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಅಮೇರಿಕಾ ಮಾತು; ಪ್ರತಿಕ್ರಿಯೆ ಹೀಗಿದೆ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೊಳಗಾಗಿರುವ ವಿಷಯದ ಬಗ್ಗೆ ಮಾತನಾಡಿದ್ದ ಅಮೇರಿಕಾ ಈಗ ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯೆ ನೀಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆANI

ವಾಷಿಂಗ್ ಟನ್: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೊಳಗಾಗಿರುವ ವಿಷಯದ ಬಗ್ಗೆ ಮಾತನಾಡಿದ್ದ ಅಮೇರಿಕಾ ಈಗ ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯೆ ನೀಡಿದೆ.

ಕೇಜ್ರಿವಾಲ್ ಪ್ರಕರಣದಲ್ಲಿ ಮಾತನಾಡಿದ್ದ ಅಮೇರಿಕಾದ ರಾಯಭಾರ ಕಚೇರಿ ಅಧಿಕಾರಿಗೆ ಭಾರತ ಸಮನ್ಸ್ ಕಳಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೇರಿಕಾ ವಕ್ತಾರ ಮ್ಯಾಥ್ಯೂ ಮಿಲ್ಲರ್, ಕಾಂಗ್ರೆಸ್ ಪಕ್ಷದ ಆರೋಪಗಳ ಕುರಿತು ನಮಗೆ ಅರಿವಿದೆ ಎಂದಷ್ಟೇ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಸ್ಥಗಿತ: 'ನಿಮ್ಮ ಖರ್ಚಲ್ಲೇ ಚುನಾವಣೆ ಎದುರಿಸಿ'; ಸಂಪುಟ ಸಹೋದ್ಯೋಗಿಗಳಿಗೆ ಸಿಎಂ-ಡಿಸಿಎಂ ಸೂಚನೆ

ಈ ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಾವು ಪ್ರೋತ್ಸಾಹಿಸುತ್ತೇವೆ, ”ಎಂದು ಅಮೇರಿಕಾ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಅರವಿಂದ್ ಕೇಜ್ರಿವಾಲ್‌ ಬಂಧನ ಕುರಿತ ಹೇಳಿಕೆ: ಅಮೆರಿಕಾ ರಾಯಭಾರಿಗೆ ಭಾರತ ಸಮನ್ಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿತ್ತು. ಅಮೆರಿಕಾ ರಾಯಭಾರ ಕಚೇರಿಯ ಹಂಗಾಮಿ ಉಪಮುಖ್ಯಸ್ಥರು ಇಂದು ಸೌತ್‌ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಈ ಭೇಟಿ ವೇಳೆ ನಡೆದ ಮಾತುಕತೆಗಳ ವಿವರಗಳು ಬಹಿರಂಗಪಡಿಸಲಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com