ಅರವಿಂದ್ ಕೇಜ್ರಿವಾಲ್‌ ಬಂಧನ ಕುರಿತ ಹೇಳಿಕೆ: ಅಮೆರಿಕಾ ರಾಯಭಾರಿಗೆ ಭಾರತ ಸಮನ್ಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿದೆ.
ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ
ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ
Updated on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ ಅವರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿದೆ.

ಈ ಹಿನ್ನೆಲೆಯಲ್ಲಿ ಅಮೆರಿಕಾ ರಾಯಭಾರ ಕಚೇರಿಯ ಹಂಗಾಮಿ ಉಪಮುಖ್ಯಸ್ಥರು ಇಂದು ಸೌತ್‌ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಭೇಟಿ ನೀಡಿದ್ದಾರೆ. ಆದರೆ ಈ ಭೇಟಿ ವೇಳೆ ನಡೆದ ಮಾತುಕತೆಗಳ ವಿವರಗಳು ಬಹಿರಂಗಪಡಿಸಲಾಗಿಲ್ಲ.

ರಾಯಭಾರಿ ಕಚೇರಿಯ ವಕ್ತಾರರು ಮಾಹಿತಿ ನೀಡಿ, ಅಬಕಾರಿ ಹಗರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಬಗ್ಗೆ ‘ನ್ಯಾಯೋಚಿತ ಹಾಗೂ ಪಾರದರ್ಶಕತೆ ನ್ಯಾಯ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎನ್ನುವ ಹೇಳಿಕೆಯ ಬಗ್ಗೆ ಮೇಲ್ವಿಚಾರಣೆಯ ಬಗ್ಗೆ ಸಭೆ ಕರೆಯಲಾಗಿತ್ತು ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ಪ್ರತಿಕ್ರಿಯೆ ನೀಡಿತ್ತು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಪ್ರತಿಕ್ರಿಯೆ ನೀಡಿದ್ದರು.

ಇದಕ್ಕೆ ತೀವ್ರ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳಿಗೆ ನಾವು ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತೇವೆ. ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಸಹವರ್ತಿ ಪ್ರಜಾಪ್ರಭುತ್ವಗಳ ಸಂದರ್ಭದಲ್ಲಿ ಈ ಜವಾಬ್ದಾರಿ ಇನ್ನೂ ಹೆಚ್ಚು. ಇದು ಇಲ್ಲದಿದ್ದರೆ ಯಾವುದೂ ಸರಿಹೊಂದಲ್ಲ. ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ನ್ಯಾಯಾಂಗವನ್ನು ಆಧರಿಸಿವೆ. ಅದರ ಮೇಲೆ ಹೇಳಿಕೆ ನೀಡುವುದು ಅನಗತ್ಯ ಎಂದು ಹೇಳಿದೆ.

ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್ಚೇರ್ ಅವರು, ಕೇಜ್ರಿವಾಲರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.

ಅಮೆರಿಕಾ ರಾಯಭಾರಿ ಕಚೇರಿಯ ಉಸ್ತುವಾರಿ ಉಪ ಮುಖ್ಯ ಅಧಿಕಾರಿ ಗ್ಲೋರಿಯಾ ಬಾರ್ಬೇನಾ
ನ್ಯಾಯಯುತ ಕಾನೂನು ಪ್ರಕ್ರಿಯೆ ಪ್ರೋತ್ಸಾಹಿಸುತ್ತೇವೆ: ದೆಹಲಿ ಸಿಎಂ ಕೇಜ್ರಿವಾಲ್ ಬಂಧನದ ಬಗ್ಗೆ ಅಮೇರಿಕಾ ಪ್ರತಿಕ್ರಿಯೆ

ನಾವು ನ್ಯಾಯಾಂಗ ಸ್ವಾತಂತ್ರ್ಯದ ಸಂಬಂಧಿಸಿದ ಮಾನದಂಡಗಳನ್ನು ನಿರೀಕ್ಷಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜಾಸತ್ತಾತ್ಮಕ ತತ್ವಗಳನ್ನು ಅಳವಡಿಸಬೇಕೆಂದು ಭಾವಿಸುತ್ತೇವೆ ಎಂದು ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದರು.

ಈ ಹೇಳಿಕೆಯ ನಂತರ ಭಾರತ ಸರ್ಕಾರವು ಜರ್ಮನಿ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥರಾದ ಜಾರ್ಜ್ ಎಂಜ್ವೇಲಿಯರ್ ಅವರನ್ನು ಕರೆಸಿಕೊಂಡು ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿತ್ತು.

ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ಹಾಗೂ ನಮ್ಮ ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು ಎಂದು ಭಾರತ ಖಂಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com