ಮಿದುಳು ಶಸ್ತ್ರಚಿಕಿತ್ಸೆ: ಸದ್ಗುರು ಜಗ್ಗಿ ವಾಸುದೇವ್ ಆಸ್ಪತ್ರೆಯಿಂದ ಬಿಡುಗಡೆ

ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಸದ್ಗುರು ಜಗ್ಗಿ ವಾಸುದೇವ್
ಆಸ್ಪತ್ರೆಯಿಂದ ಬಿಡುಗಡೆಯಾದ ಸದ್ಗುರು ಜಗ್ಗಿ ವಾಸುದೇವ್

ನವದೆಹಲಿ: ಇತ್ತೀಚೆಗೆ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಅವರು ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಬುಧವಾರ ತಿಳಿಸಿವೆ.

ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ಪ್ರಕಾರ, ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರ ತಲೆಬುರುಡೆಯಲ್ಲಿ 'ಮಾರಣಾಂತಿಕ' ರಕ್ತಸ್ರಾವ ಉಂಟಾದ ನಂತರ ಮಾರ್ಚ್ 17ರಂದು ಅವರಿಗೆ ಮಿದುಳಿನ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸದ್ಗುರು ಆಸ್ಪತ್ರೆಯಿಂದ ಹೊರಬರುತ್ತಿರುವ ವಿಡಿಯೋ ತುಣುಕಿನಲ್ಲಿ ಅವರ ಅನುಯಾಯಿಗಳು ಅವರನ್ನು ಸ್ವಾಗತಿಸುತ್ತಿರುವುದನ್ನು ಕಾಣಬಹುದು.

ಸದ್ಗುರು ಅವರ ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡದ ನೇತೃತ್ವ ವಹಿಸಿದ್ದ ಆಸ್ಪತ್ರೆಯ ಹಿರಿಯ ಸಲಹೆಗಾರ ನರರೋಗ ತಜ್ಞ ವಿನಿತ್ ಸೂರಿ, ಸದ್ಗುರು ಅವರ ಜೀವಕ್ಕೆ ಕುತ್ತು ಉಂಟಾಗುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾದ ಸದ್ಗುರು ಜಗ್ಗಿ ವಾಸುದೇವ್
ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬ್ರೇನ್ ಸರ್ಜರಿ

66 ವರ್ಷದ ಸದ್ಗುರು ಅವರು 'ಮಣ್ಣು ರಕ್ಷಿಸಿ' ಮತ್ತು 'ನದಿಗಳನ್ನು ಉಳಿಸಿ' ಮುಂತಾದ ಅಭಿಯಾನಗಳನ್ನು ಪ್ರಾರಂಭಿಸಿದ್ದರು.

ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರು ಮಾರ್ಚ್ 15ರಂದು ನರರೋಗ ತಜ್ಞ ಡಾ. ವಿನಿತ್ ಸೂರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ವೈದ್ಯರ ಸಲಹೆ ಮೇರೆಗೆ ಎಂಆರ್‌ಐ ಮಾಡಿಸಿದಾಗ, ರಕ್ತಸ್ರಾವವಾಗುತ್ತಿರುವುದು ಕಂಡುಬಂದಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಲಾಗಿತ್ತಾದರೂ, ಅದಾದ ಎರಡು ದಿನಗಳ ಬಳಿಕ ಸದ್ಗುರು ಆಸ್ಪತ್ರೆಗೆ ದಾಖಲಾಗಿದ್ದರು.

ಮಾರಣಾಂತಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಸದ್ಗುರು ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಮಾರ್ಚ್ 17ರಂದು ತುರ್ತು ಮಿದುಳಿನ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಅದಾದ ಬಳಿಕ ಅವರು ಚೇತರಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com