ಕಾಂಗ್ರೆಸ್ ಆಯ್ತು, 11 ಕೋಟಿ ರೂ. ಬಾಕಿ ಪಾವತಿಸುವಂತೆ ಈಗ ಸಿಪಿಐಗೆ ಐಟಿ ಇಲಾಖೆ ನೋಟಿಸ್!

ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಸಿಪಿಐ
ಸಿಪಿಐ

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ತೆರಿಗೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಲು ಎಡಪಕ್ಷವು ತನ್ನ ವಕೀಲರನ್ನು ಸಂಪರ್ಕಿಸುತ್ತಿದೆ ಎಂದು ತಿಳಿದುಬಂದಿದೆ.

ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಿದ್ದಕ್ಕಾಗಿ ಪಾವತಿಸಬೇಕಾದ ತೆರಿಗೆ ಬಾಕಿ, ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸಿಪಿಐಗೆ ಈ ನೋಟಿಸ್ ಜಾರಿ ಮಾಡಿದೆ ಮೂಲಗಳು ತಿಳಿಸಿವೆ.

ಸಿಪಿಐ
ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,700 ಕೋಟಿ ರೂ. ಹೊಸ ನೋಟಿಸ್!

ಆದಾಯ ತೆರಿಗೆ ಇಲಾಖೆಯು ನೋಟಿಸ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ನೆರವು ಪಡೆಯಲು ನೋಡುತ್ತಿದ್ದೇವೆ ಮತ್ತು ಅದಕ್ಕಾಗಿ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ ಎಂದು ಹಿರಿಯ ಸಿಪಿಐ ನಾಯಕರೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಪಾವತಿಸುವಂತೆ ಹೊಸ ನೋಟಿಸ್ ಅನ್ನು ನೀಡಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸಾಕೇತ್ ಗೋಖಲೆ ಅವರು ಕಳೆದ 72 ಗಂಟೆಗಳಲ್ಲಿ 11 ಐಟಿ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.

ಸಿಪಿಐ
ಐಟಿ ಇಲಾಖೆ 1700 ಕೋಟಿ ರೂ. ನೋಟಿಸ್: ಚುನಾವಣೆ ವೇಳೆ ಆರ್ಥಿಕವಾಗಿ ವಿಪಕ್ಷಗಳ ಕತ್ತು ಹಿಸುಕುತ್ತಿದೆ ಬಿಜೆಪಿ; ಕಾಂಗ್ರೆಸ್ ಕಿಡಿ

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳನ್ನು ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com